ಬೆಂಗಳೂರು: ಹೊಸ ವರ್ಷ ಆಚರಿಸಲು ಎಲ್ಲರೂ ಸಜ್ಜಾಗಿದ್ದಾರೆ. ಇದಕ್ಕೆ ಬೆಂಗಳೂರು ಕೂಡ ಹೊರತಲ್ಲ. ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿಯ ಜನರು ಸಿದ್ಧರಾಗಿದ್ದಾರೆ.
ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಇಂದಿರಾನಗರ, ಕೋರಮಂಗಲದಲ್ಲಿ ಜನರು ಸಾಗರವಾಗಿ ಹರಿಯುತ್ತಿದ್ದಾರೆ. ಒಂದು ವೇಳೆ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪಾನಮತ್ತರಾಗಿ ಬಿದ್ದರೆ, ನೇರ ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಇದಕ್ಕಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಇಂದಿರಾನಗರದ 80 ಫೀಟ್, 100 ಫೀಟ್ ರಸ್ತೆಗಳು ಜಗಮಗವಾಗುತ್ತಿದ್ದು, ಪ್ರತಿ ರಸ್ತೆಯಲ್ಲೂ ಮಹಿಳಾ ಸುರಕ್ಷತಾ ತಾಣ ನಿರ್ಮಿಸಲಾಗಿದ್ದು, ಮಹಿಳೆಯರಿಗೆ ಯಾವುದೇ ತೊಂದರೆಯಾಗದಂತೆ ಮಾಡಲಾಗಿದೆ. ಮಹಿಳಾ ಸುರಕ್ಷತೆಗಾಗಿ ಐ ಲ್ಯಾಂಡ್ ಸ್ಥಾಪನೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.








