ರಾಮನಗರ: ರಾಜ್ಯದ ಮೂರು ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಚನ್ನಪಟ್ಟಣ ಕ್ಷೇತ್ರ ಎಲ್ಲರನ್ನು ಆಕರ್ಷಿಸಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ಸಿ.ಪಿ. ಯೋಗೇಶ್ವರ್ ಮಾತನಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ನಾನು ಕಾಂಗ್ರೆಸ್ (Congress) ಸೇರುವ ಅನಿವಾರ್ಯ ಸ್ಥಿತಿಯನ್ನು ನಿರ್ಮಾಣ ಮಾಡಿದ್ದರು. ಆದ್ದರಿಂದ ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಇನ್ನೂ ಜಮೀರ್ ಹೇಳಿಕೆ ಒಂದು ಕಡೆ ಲಾಭ ಆದ್ರೆ, ಒಂದಷ್ಟು ನಷ್ಟ ಆಗಿದೆ ಎಂದು ಹೇಳಇದ್ದಾರೆ.
ಈ ವೇಳೆ ಕಾರ್ಯಕರ್ತರು, ನಾಯಕರು ಹಾಗೂ ಚನ್ನಪಟ್ಟಣದ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಸಾಕಷ್ಟು ಶಾಸಕರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಡಿ.ಕೆ ಸುರೇಶ್ (DK Suresh) ವಿಶೇಷವಾಗಿ ಕೆಲಸ ಮಾಡಿದ್ದಾರೆ. ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಇದು. ತೀವ್ರತೆ ಪಡೆಯುತ್ತದೆ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾದ ಕ್ಷೇತ್ರ, ಕುಟುಂಬಕ್ಕೆ ಉಳಿಸಿಕೊಳ್ಳಲು ಮುಂದಾದ್ರು. ರಾಜಕೀಯ ದೈತ್ಯ ನಾಯಕ ದೇವೇಗೌಡರ ಹಠ, ಮೊಮ್ಮಗನ ಗೆಲ್ಲಿಸುವ ಶಪಥ ಮಾಡಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರನನ್ನ ಗೆಲ್ಲಿಸಿಕೊಂಡು ಕ್ಷೇತ್ರ ಉಳಿಸಿಕೊಳ್ಳಲು ಹೋರಾಟ ಮಾಡಿದ್ರು. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ. ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತದೆ. ಎಲ್ಲಾ ಚುನಾವಣೆಯಲ್ಲೂ 80 ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಇದೆ ಎಂದಿದ್ದಾರೆ.








