ದೆಹಲಿ ಐಐಟಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಸಂಜಯ್ ನೇರ್ಕರ್ (24) ಆತ್ಮಹತ್ಯೆಯ ಸ್ಥಿತಿಯಲ್ಲಿ ಪತ್ತೆಯಾಗಿರುವ ವಿದ್ಯಾರ್ಥಿ. ಕುಟುಂಬಸ್ಥರು ಫೋನ್ ಮಾಡದಿದ್ದಾಗ ಹಾಸ್ಟೆಲ್ ಮೇಟ್ ನನ್ನು ವಿಚಾರಿಸಿದ್ದಾರೆ. ಆತ ರೂಮ್ ಗೆ ಬಂದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಯು ಮಹಾರಾಷ್ಟ್ರದ ನಾಸಿಕ್ ಮೂಲದವನು ಎನ್ನಲಾಗಿದೆ. ಆತ ರೂಮ್ ಒಳಗೆ ಲಾಕ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೋಟಾದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆ ನಡೆಯುತ್ತಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.