ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನಗೆ ಮೂರು ತಿಂಗಳು ಟೈಮ್ ಕೊಡಿ.. ಮೂರು ರಣಜಿ ಪಂದ್ಯ ಆಡಲು ಕೊಡಿ.. ಟೆಸ್ಟ್ ಕ್ರಿಕೆಟ್ ನಲ್ಲಿ ರನ್ ಹರಿಸುತ್ತೇನೆ – ಸೌರವ್ ಗಂಗೂಲಿ

admin by admin
July 17, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ನನಗೆ ಮೂರು ತಿಂಗಳು ಟೈಮ್ ಕೊಡಿ.. ಮೂರು ರಣಜಿ ಪಂದ್ಯ ಆಡಲು ಕೊಡಿ.. ಟೆಸ್ಟ್ ಕ್ರಿಕೆಟ್ ನಲ್ಲಿ ರನ್ ಹರಿಸುತ್ತೇನೆ – ಸೌರವ್ ಗಂಗೂಲಿ

ಸೌರವ್ ಗಂಗೂಲಿ.. ಟೀಮ್ ಇಂಡಿಯಾದ ಮಾಜಿ ನಾಯಕ. ಬಲಿಷ್ಠ ಟೀಮ್ ಇಂಡಿಯಾವನ್ನು ಕಟ್ಟಿ ಬೆಳೆಸಿದ್ದ ಸೌರವ್ ಗಂಗೂಲಿಯವರನ್ನು ಕ್ರಿಕೆಟ್ ಬದುಕಿನ ಕೊನೆಯ ದಿನಗಳಲ್ಲಿ ಸರಿಯಾಗಿ ನಡೆಸಿಕೊಳ್ಳಲಿಲ್ಲ. 2005ರಲ್ಲಿ ನಾಯಕತ್ವ ಕಳೆದುಕೊಂಡ ಗಂಗೂಲಿಯವರನ್ನು ತಂಡದಿಂದಲೇ ಕೈಬಿಡಲಾಗಿತ್ತು. ಬಳಿಕ 2006ರಲ್ಲಿ ಮತ್ತೆ ತಂಡ ಸೇರಿಕೊಂಡ್ರು. 2007-08ರಲ್ಲೂ ರನ್ ಮಳೆಯನ್ನೇ ಸುರಿಸಿದ್ರು. ಆದ್ರೆ ಅವರನ್ನು ಒತ್ತಾಯಪೂರ್ವಕವಾಗಿಯೇ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಾಗಿತ್ತು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ.
ಆದ್ರೆ ಸೌರವ್ ಗಂಗೂಲಿಗೆ ಆ ನೋವು ಮಾತ್ರ ಈಗಲೂ ಕಾಡುತ್ತಿದೆ. ಈ ಬಗ್ಗೆ ಇತ್ತೀಚಿನ ಸಾಮಾಜಿಕ ಜಾಲ ತಾಣದ ಲೈವ್ ಕಾರ್ಯಕ್ರಮದಲ್ಲೂ ಹೇಳಿಕೊಂಡಿದ್ದರು. ಇದೀಗ ಬಂಗಾಳಿ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಸೌರವ್ ಗಂಗೂಲಿ ತನ್ನಲ್ಲಿ ಕ್ರಿಕೆಟ್ ಆಡುವ ಶಕ್ತಿ ಇನ್ನೂ ಇದೆ ಎಂದು ಹೇಳಿಕೊಂಡಿದ್ದಾರೆ. ಅದಕ್ಕಾಗಿ ಸವಾಲು ಕೂಡ ಹಾಕಿದ್ದಾರೆ.
ನನಗೆ ಮೂರು ತಿಂಗಳು ಸಮಯ ಕೊಡಿ. ಮೂರು ರಣಜಿ ಪಂದ್ಯಗಳಲ್ಲಿ ಆಡುವ ಅವಕಾಶ ನೀಡಿ. ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ರನ್ ಸುರಿಸುತ್ತೇನೆ ಎಂದಿದ್ದಾರೆ. ಇದು ಸೌರವ್ ಗಂಗೂಲಿಯವರ ತಾಕತ್ತು.. ದಾದಾನ ಆತ್ಮವಿಶ್ವಾಸ. ಕೊಲ್ಕತ್ತಾ ಮಹಾರಾಜನ ಕ್ರಿಕೆಟ್ ಆಟದ ಹಸಿವು.
ಏಕದಿನ ಕ್ರಿಕೆಟ್ ನಲ್ಲಿ ಇನ್ನೆರಡು ಸರಣಿಗಳನ್ನು ನೀಡುತ್ತಿದ್ರೆ ನಾನು ಇನ್ನಷ್ಟು ರನ್ ದಾಖಲಿಸುತ್ತೆ. ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ವಿದಾಯ ಹೇಳದೇ ಇರುತ್ತಿದ್ರೆ, ಮುಂದಿನ ಎರಡು ಟೆಸ್ಟ್ ಪಂದ್ಯಗಳಲ್ಲೂ ರನ್ ದಾಖಲಿಸುತ್ತಿದ್ದೆ. ಈಗಲೂ ಅಷ್ಟೇ. ನನಗೆ ಅಭ್ಯಾಸಕ್ಕಾಗಿ ಆರು ತಿಂಗಳು ಸಮಯ ಕೊಡಿ. ಆಡಲು ಮೂರು ರಣಜಿ ಪಂದ್ಯಗಳನ್ನು ನೀಡಿ. ಟೆಸ್ಟ್ ಕ್ರಿಕೆಟ್ ನಲ್ಲಿ ರನ್ ಸುರಿಸುತ್ತೇನೆ. ನನಗೆ ಆರು ತಿಂಗಳು ಬೇಡ. ಮೂರು ತಿಂಗಳು ಸಾಕು. ನಾನು ಹೆಚ್ಚು ರನ್ ದಾಖಲಿಸುತ್ತೇನೆ ಎಂದು ಹೇಳಿದ್ದಾರೆ.
2007-08 ರಲ್ಲಿ ನನ್ನನ್ನು ತಂಡದಿಂದ ಮತ್ತೆ ಕೈಬಿಡಲಾಗಿತ್ತು. ಏಕದಿನ ತಂಡದಿಂದ ನನ್ನನ್ನು ಕೈಬಿಟ್ಟಿರುವುದು ನನಗೆ ಅಚ್ಚರಿಯಾಗಿತ್ತು. ಯಾಕಂದ್ರೆ ಆ ಕ್ಯಾಲೆಂಡರ್ ವರ್ಷದಲ್ಲಿ ನಾನು ಗರಿಷ್ಠ ರನ್ ದಾಖಲಿಸಿದ್ದೆ. ಇನ್ನೆನು ಸಾಬೀತುಪಡಿಸಬೇಕು ಎಂಬ ಭಾವನೆ ಮೂಡುವುದು ಸಹಜ. ಅದೇ ರೀತಿ ನನಗೂ ಆಗಿತ್ತು ಎಂದು ಗಂಗೂಲಿ ಹೇಳಿಕೊಂಡಿದ್ದಾರೆ.
ಸೌರವ್ ಗಂಗೂಲಿ 2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. 113 ಟೆಸ್ಟ್ ಪಂದ್ಯಗಳಲ್ಲಿ 7212 ರನ್ ದಾಖಲಿಸಿದ್ದಾರೆ. ಅದೇ ರೀತಿ 311 ಏಕದಿನ ಪಂದ್ಯಗಳಲ್ಲಿ 11363 ರನ್ ಗಳಿಸಿದ್ದಾರೆ. ಒಟ್ಟು ಕ್ರಿಕೆಟ್ ಬದುಕಿನಲ್ಲಿ 16 ಟೆಸ್ಟ್ ಶತಕ ಹಾಗೂ 22 ಏಕದಿನ ಶತಕಗಳು ಸೇರಿ 38 ಶತಕಗಳನ್ನು ದಾಖಲಿಸಿದ್ದಾರೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
Tags: bccidadaIndian cricketSourav Gangulyteam india
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram