ವಿಟ್ಲ : ಕೊರೊನಾ ಲಾಕ್ ಡೌನ್ ನಡುವೆ ಕಳವು ಮಾಡಿದ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಗೋವುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಪೊಲೀಸರು ದಾಳಿ ನಡೆಸಿದ್ದು, ಮೂರು ಹಸುಗಳು ಸೇರಿದಂತೆ ವಾಹನವನ್ನು ಒಕ್ಕೆತ್ತೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ವಾಹನದಲ್ಲಿದ್ದ ಮೂವರು ತಪ್ಪಿಸಿಕೊಂಡಿದ್ದಾರೆ.
ವಿಟ್ಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನೋದ್ ಕೆ. ಎಸ್. ನೇತೃತ್ವದ ತಂಡ ದಾಳಿ ನಡೆಸಿದ್ದು, ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತಪ್ಪಿಸಿಕೊಂಡವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.








