ಅಕ್ರಮ ಚಿನ್ನ ಸಾಗಾಟ | ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

1 min read
Mangalore

ಮಂಗಳೂರು : ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್ ಮತ್ತು ಕೊಝಿಕೋಡ್​ನ ಮೊಹಮ್ಮದ್ ಮೂಸ ಮಿಯಾಸ್, ಬಂಧಿತರು.

ಇವರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು.

Mangalore

ತಪಾಸಣೆ ನಡೆಸಿದಾಗ ಸೂಟ್​​​​ಕೇಸ್​ನ ಕೆಳಭಾಗದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.

ಆರೋಪಿಗಳಿಂದ 703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಇದರ ಮೌಲ್ಯ 34,46,464 ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Mangalore

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd