ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ (Shimla) ಅಕ್ರಮ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಉದ್ವಿಗ್ನತೆ ಮನೆ ಮಾಡಿದೆ.
ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ ನಡೆದಿದೆ. ಮಹಿಳೆಯರು ಸೇರಿದಂತೆ ಪ್ರತಿಭಟನಾಕಾರರು ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಪ್ರತಿಭಟನಾಕಾರರ ಗುಂಪು ಬ್ಯಾರಿಕೇಡ್ ಗಳನ್ನು ತೆಗೆದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಜಲಫಿರಂಗಿ ಮತ್ತು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಬುಧವಾರ ಶಿಮ್ಲಾದ ಧಲ್ಲಿ ಪ್ರದೇಶದಲ್ಲಿ ಜಮಾಯಿಸಿದರು. ಸಂಜೌಲಿ ಪ್ರದೇಶದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದರು. ಹಿಂದೂ-ಮುಸ್ಲಿಂ ಸಮಸ್ಯೆಯನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆ ಎಂದು ಹಿಮಾಚಲ ಪ್ರದೇಶ ಸಿಎಂ ನರೇಶ್ ಚವ್ಹಾಣ್ ಆರೋಪಿಸಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್, ಅಕ್ರಮ ನಿರ್ಮಾಣದ ವಿರುದ್ಧ ರಾಜ್ಯವು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.








