ಅಕ್ರಮ ಮರಳು ದಂಧೆ ತಡೆಯಲು ಯತ್ನಿಸಿದ್ದ ಪೊಲೀಸ್ ಅಧಿಕಾರಿ ಮೇಲೆಯೇ ಟ್ರ್ಯಾಕ್ಟರ್ ಹರಿಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಪೇದೆಯೊಬ್ಬರ ಮೇಲೆಯೇ ಟ್ರ್ಯಾಕ್ಟರ್ ಹರಿದಿದೆ. ಪೊಲೀಸ್ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಎಸ್‌ಐ ಮಹೇಂದ್ರ ಬಾಗ್ರಿ ಮತ್ತು ಇಬ್ಬರು ಸಹಚರರು ವಾರಂಟ್ ತೆಗೆದುಕೊಂಡು ತೆರಳಿದ್ದರು. ಈ ಸಂದರ್ಭದಲ್ಲಿ ದಾರಿಯಲ್ಲಿ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯನ್ನು ವೇಗವಾಗಿ ಬಂದಿದೆ. ಅದನ್ನು ನಿಲ್ಲಿಸಲು ಹೇಳಿದಾಗ ಪೊಲೀಸ್ ಅಧಿಕಾರಿಯ ಮೇಲೆಯೇ ಹರಿಸಿದ್ದಾರೆ.
ವಾಹನವು ಎಎಸ್ಐ ಮೇಲೆ ಹರಿದುಹೋಗಿದೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ. ವೇಗವಾಗಿ ಬಂದ ವಾಹನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸದ್ಯ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.