ಬೆಂಗಳೂರು: ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1 ಕೆಜಿಗೂ ಅಧಿಕ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ದಾಳಿಯಲ್ಲಿ 1 ಕೆಜಿಗೂ ಅಧಿಕ ಪ್ರಮಾಣದ ಚಿನ್ನವನ್ನು ಸೀಜ್ ಮಾಡಲಾಗಿದೆ.
ಒಂದೇ ದಿನ ವಿಮಾನ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 72.76 ಲಕ್ಷ ರೂ. ಮೌಲ್ಯದ 1 ಕೆಜಿ 166 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಓರ್ವ ಹಾಗೂ ಮೂವರು ದೇಶಿಯ ಪ್ರಯಾಣಿಕರನ್ನು ಬಂಧಿಸಲಾಗಿದೆ.
ಕೊಲಂಬೋದಿಂದ ಆಗಮಿಸಿ ಏರ್ಪೋರ್ಟ್ನಲ್ಲಿ ಬೇರೆಯವರಿಗೆ ಚಿನ್ನ ಸಾಗಿಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಇನ್ನುಳಿದ ಎರಡು ಪ್ರಕರಣಗಳಲ್ಲಿ ಚೈನ್ ಹಾಗೂ ಬಿಸ್ಕೆಟ್ ರೂಪದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುವ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.