ಆನೇಕಲ್: ಪ್ರೀತಿಸಿದ ಗೆಳತಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನ್ನು ಕಣ್ಣಾರೆ ಕಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಾವನ್ನಪ್ಪಿದ ಯುವಕನ ಕುಟುಂಬಸ್ಥರು ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆಂದು ಆರೋಪ ಮಾಡಿದ್ದಾರೆ. ದಿವ್ಯಾ ಎಂಬ ಮಹಿಳೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು. ನಂತರ ವಿಚ್ಛೇದನ ಪಡೆದಿದ್ದರು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲಿಯೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದಾಳೆ. ಆನಂತರ ಇಬ್ಬರೂ ಗಂಡ- ಹೆಂಡತಿ ಎಂದು ಹೇಳಿ ಚಿಕ್ಕನಾಗಮಂಗಲದಲ್ಲಿ ಬಾಡಿಗೆ ಮನೆ ಪಡೆದು 6 ತಿಂಗಳಿನಿಂದ ಲೀವ್ ಇನ್ ರಿಲೇಷನ್ ನಲ್ಲಿದ್ದಾರೆ.
ವಿದ್ಯಾ ಐಟಿ ಕಂಪನಿ ಉದ್ಯೋಗಿಯಾಗಿದ್ದರೆ, ಅನ್ಬರಾಸನ್ ಫ್ಲಿಪ್ ಕಾರ್ಟ್ನಲ್ಲಿ ಮ್ಯಾನೇಜರ್ ಆಗಿದ್ದರು. ಈ ಸಂದರ್ಭದಲ್ಲಿಯೇ ವಿದ್ಯಾ ಸಂತೋಷ್ ಎಂಬ ಯುವಕನೊಂದಿಗೆ ಲವ್ವಿ ಡವ್ವಿ ಆರಂಭಿಸಿದ್ದಾಳೆ ಎನ್ನಲಾಗಿದೆ. ಈ ಸಂಗತಿ ಅನ್ವರಸನ್ ಗೆ ಗೊತ್ತಾಗಿದೆ. ಅಲ್ಲದೇ, ಇಬ್ಬರು ಜೊತೆಯಾಗಿರುವುದನ್ನು ಕಣ್ಣಾರೆ ಕಂಡಿದ್ದಾನೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸಂತೋಷ್ ಹಾಗೂ ವಿದ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.