ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ (Darshan) ಬೆನ್ನುನೋವು ಇದೆ ಎಂದು ಕುಟುಂಬಸ್ಥರು ಪೊಲೀಸರಿಗೆ ಮೆಡಿಕಲ್ ರಿಪೋರ್ಟ್ ನೀಡಿದ್ದಾರೆ. ಹೀಗಾಗಿ ಜೈಲಾಧಿಕಾರಿಗಲು ಆರೋಪಿ ದರ್ಶನ್ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ.
ಬೆನ್ನು ನೋವಿನಿಂದಾಗಿ ದರ್ಶನ್ ಬಳಲುತ್ತಿದ್ದಾರೆ. ಅಲ್ಲದೇ, ಮೋಷನ್ ಸಮಸ್ಯೆ ಕೂಡ ಎದುರಿಸುತ್ತಿದ್ದಾರೆ. ಹೀಗಾಗಿ ವೆಸ್ಟರ್ನ್ ಟಾಯ್ಲೆಟ್ ಅಥವಾ ಸರ್ಜಿಕಲ್ ಚೇರ್ ಗೆ ನಟ ಮನವಿ ಮಾಡಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ ವೈದ್ಯರು ದರ್ಶನ್ ರನ್ನು ಚಿಕಿತ್ಸೆಗೆ ಒಳಪಡಿಸಿದ್ದಾರೆ. ಬೆನ್ನು ನೋವಿನ ತೀವ್ರತೆ ಬಗ್ಗೆ ವೈದ್ಯಕೀಯ ತಪಾಸಣೆ ಬಳಿಕ ಡಿಐಜಿಗೆ ಸಲ್ಲಿಕೆ ಮಾಡಲಾಗುವುದು. ಸದ್ಯ ಸಾಮಾನ್ಯ ಕೈದಿಯಂತೆ ದರ್ಶನ್‌ಗೂ ಜೈಲಲ್ಲಿ ತಪಾಸಣೆ ನಡೆಸಲಾಗಿದೆ.
ಬಳ್ಳಾರಿ ಸೆಂಟ್ರಲ್ ಜೈಲ್ ನಲ್ಲಿ ಎ2 ಆರೋಪಿ ನಟ ದರ್ಶನ್‌ಗೆ ಮಧ್ಯಾಹ್ನದ ಊಟ ನೀಡಲಾಗಿದೆ. ಪತ್ನಿ ವಿಜಯಲಕ್ಷ್ಮಿ ತಂದಿದ್ದ ತಿನಿಸುಗಳೊಂದಿಗೆ ದರ್ಶನ್ ಊಟ ಮಾಡಿದ್ದಾರೆ ಎನ್ನಲಾಗಿದೆ. ರಾಗಿ ಮುದ್ದೆ, ಅನ್ನ, ಸಾಂಬಾರು, ಮಜ್ಜಿಗೆ ಊಟ ಮಾಡಿದ್ದಾರೆ. ಜೈಲಿನಲ್ಲಿ ದರ್ಶನ್ ಆರೋಗ್ಯ ತಪಾಸಣೆ ನಡೆಸಲಾಯಿತು. ಸ್ಟಾಫ್ ನರ್ಸ್ ಹಾಗೂ ಡ್ಯೂಟಿ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಬಿಪಿ ಹಾಗೂ ಶುಗರ್ ಪರೀಕ್ಷೆ ಮಾಡಲಾಯಿತು.








