ನಾನು ಮುಸ್ಲಿಂ ವಿರೋಧಿಯಲ್ಲ. ಬೇಕಾದರೆ ನನ್ನನ್ನು ಬಂಧಿಸಲಿ, ನೇಣಿಗೆ ಹಾಕಲಿ ಎಂದು ಸಿ.ಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಸ್ಲಿಂ ಸಮುದಾಯದ ವಿರೋಧಿಯಲ್ಲ. ಬೇಕಿದ್ದರೆ, ನನ್ನನ್ನು ಬಂಧಿಸಲಿ, ನೇಣಿಗೆ ಹಾಕಲಿ, ಇದೆ ವೇಳೆ ತಮ್ಮ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಾವು ಈ ಹಿಂದೆ ನೀಡಿದ ಹೇಳಿಕೆಯ ಬಗ್ಗೆ ಏನನ್ನೂ ಹೇಳುವುದಿಲ್ಲ, ನನ್ನ ವಿರುದ್ಧ ದೂರು ದಾಖಲು ಮಾಡಿರುವುದನ್ನು ಸ್ವಾಗತಿಸುತ್ತೇನೆ. ನನ್ನ ವಿರುದ್ಧ ಏನೇ ಮಾಡಿದರೂ ಅದನ್ನು ಅರಗಿಸಿಕೊಳ್ಳುವ ಶಕ್ತಿ ನನಗಿದೆ ಎಂದು ಹೇಳಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನಿಜಾಮುದ್ದಿನ್ ಸಮಾವೇಶದಲ್ಲಿ ಬಾಗಿಯಾಗಿ ಬಂದವರು ವೈದ್ಯಕೀಯ ತಪಾಸಣೆಗೆ ಒಳಗಾಗದೆ ಇದ್ದವನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿ ನೀಡಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ದಾವಣಗೆರೆಯ ಕೆಟಿಜೆ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಸಮಾಜದಲ್ಲಿ ಶಾಂತಿ ಕದಡುವಂತಹ ಹೇಳಿಕೆ ನೀಡಿರುವ ಕಾರಣ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಉಚ್ಚಾಟಿಸಬೇಕು ಎಂದು ಸುಭಾಷ್ ಚಂದ್ರ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ರೇಣುಕಾಚಾರ್ಯ ದೂರು ನೀಡಿರುವುದನ್ನು ಸ್ವಾಗತಿಸಿದ್ದಾರೆ








