ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿರುವ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿರುವ ಜನರು ಅಂತಮ ನಮನ ಸಲ್ಲಿಸಿದ್ದಾರೆ.
ಜಿಗಣಿ ನಂದನವನ ಬಡಾವಣೆಯಲ್ಲಿ ಯೋಧನ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆ ಸಾರ್ವಜನಿಕರು ಮತ್ತು ಗಣ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಿದೆ. ಬ್ಯಾರಿಕೇಡ್‌ಗಳನ್ನ ಹಾಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಲ್ಲದೇ, ಅಂತಿಮ ದರ್ಶನದ ನಂತರ ಯಾತ್ರೆ ಹೊರಡಲಿದೆ. ನಂತರ ಯೋಧನ ಅಂತ್ಯಕ್ರಿಯೆ ನಡೆಯಲಿದೆ.








