ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ಮುಗಿದಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೌಲ್ಯ ಮಾಪನ ಆರಂಭವಾಗಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) II PU ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಏಪ್ರಿಲ್ 5 ರಿಂದ ಪ್ರಾರಂಭಿಸಿದೆ. ಈ ವರ್ಷ, KSEAB ರಾಜ್ಯದಾದ್ಯಂತ 23 ಸಾವಿರ ಅರ್ಹ ಶಿಕ್ಷಕರನ್ನು ಮೌಲ್ಯಮಾನಪಕ್ಕಾಗಿ ನಿಯೋಜಿಸಲಾಗಿದೆ.
ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು. ಇದರಲ್ಲಿ 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷರ್ಸ್) , 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ರಾಜ್ಯದಲ್ಲಿ ಘೋಷಣೆಯಾಗಿರುವ ಚುನಾವಣಾ ವೇಳಾಪಟ್ಟಿ ಪ್ರಕಾರ ಎಲ್ಲಾ ಶಾಲೆಗಳನ್ನು ಚುನಾವಣಾ ಮತಗಟ್ಟೆಯನ್ನಾಗಿ ಪರಿವರ್ತಿಸಲಾಗುತ್ತದೆ. ಶಿಕ್ಷಕರಿಗೆ ಈ ಸಂದರ್ಭದಲ್ಲಿ ಶಿಕ್ಷಕರಿಗೆ ಕೆಲವು ತರಬೇತಿಗಳನ್ನು ನೀಡಲಾಗುತ್ತದೆ. ತರಬೇತಿ ಪಡೆಯಬೇಕಾದರೆ ಶಿಕ್ಷಕರು ಲಭ್ಯವಿರಬೇಕಾಗುತ್ತದೆ. ಇತ್ತೀಚಿಗೆ ಮುಕ್ತಾಯಗೊಂಡ ದ್ವಿತೀಯ ಪಿಯು ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ವಿಳಂಬಗೊಳಿಸಲು ಶಿಕ್ಷಕರಿಗೆ ಚುನಾವಣೆ ಬಗ್ಗೆ ನೀಡುವ ತರಬೇತಿಯೂ ಒಂದು ಕಾರಣವಾಗಬಹುದು. ಏಕೆಂದರೆ, ಈ ಶಿಕ್ಷಕರು ಚುನಾವಣಾ ಕಾರ್ಯವನ್ನು ಕೂಡ ಮಾಡಬೇಕಾಗುತ್ತದೆ. ಏಪ್ರಿಲ್ ಅಂತ್ಯದ ವೇಳೆಗೆ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.








