ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಝಿಕಾ ವೈರಸ್ ನ ಬಗ್ಗೆ ತಿಳಿದಿರಬೇಕಾದ ಪ್ರಮುಖ ಮಾಹಿತಿಗಳು

Shwetha by Shwetha
August 3, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
zika-virus saaksha tv
Share on FacebookShare on TwitterShare on WhatsappShare on Telegram

ಝಿಕಾ ವೈರಸ್ ನ ಬಗ್ಗೆ ತಿಳಿದಿರಬೇಕಾದ ಪ್ರಮುಖ ಮಾಹಿತಿಗಳು

ಕೋವಿಡ್ ಸೋಂಕಿನ ನಂತರ, ಝಿಕಾ ವೈರಸ್ ವೇಗವಾಗಿ ಹರಡುತ್ತಿದೆ. ಕೇರಳದಲ್ಲಿ 60 ಕ್ಕೂ ಹೆಚ್ಚು ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರ ಮಹಾರಾಷ್ಟ್ರದ ಪುಣೆಯಲ್ಲಿ ಮೊದಲ ಪ್ರಕರಣ ವರದಿಯಾಗಿದೆ. ಇಲ್ಲಿ 50 ವರ್ಷದ ಮಹಿಳೆಗೆ ಝಿಕಾ ವೈರಸ್ ತಗುಲಿರುವುದು ವರದಿಯಲ್ಲಿ ಧೃಡಪಟ್ಟಿದೆ. ಜುಲೈ 8 ರಂದು ಕೇರಳದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ವರದಿಯಾಗಿದೆ. ಪ್ರಸ್ತುತ, ಇಲ್ಲಿ 63 ಸಕ್ರಿಯ ಪ್ರಕರಣಗಳಿವೆ. ಆದರೆ ಅಧಿಕಾರಿಗಳು ಯಾರೂ ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಆತಂಕಿತರಾಗುವ ಅವಶ್ಯಕತೆ ಇಲ್ಲ ಎಂದು ಜನರಿಗೆ ಮನವಿ ಮಾಡಲಾಗಿದೆ. ಝಿಕಾ ವೈರಸ್ ಪತ್ತೆಯಾದ ಮಹಿಳೆ ಚಿಕಿತ್ಸೆ ಪಡೆದ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
Kerala zika viral
ಡಬ್ಲ್ಯುಎಚ್‌ಒ ಪ್ರಕಾರ, ಝಿಕಾ ವೈರಸ್ ಡೆಂಗ್ಯೂ ಜ್ವರ, ಹಳದಿ ಜ್ವರ ಮತ್ತು ವೆಸ್ಟ್ ನೈಲ್ ವೈರಸ್ ಅನ್ನು ಹೋಲುತ್ತದೆ ಮತ್ತು ಹೆಚ್ಚಾಗಿ ಈಡಿಸ್ ಜಾತಿಯ ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಇದು ಮುಂಜಾನೆ ಮತ್ತು ಮಧ್ಯಾಹ್ನ ಅಥವಾ ಸಂಜೆ ಕೂಡ ಕಚ್ಚುತ್ತದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಝಿಕಾ ವೈರಸ್ ರೋಗಲಕ್ಷಣಗಳು
– ಜ್ವರ

– ದೇಹದಲ್ಲಿ ನೋವು

– ದದ್ದು

– ಸ್ನಾಯುಗಳು ಮತ್ತು ಕೀಲುಗಳಲ್ಲಿ ನೋವು

– ಅಸ್ವಸ್ಥತೆ ಅಥವಾ ತಲೆನೋವು.

ಸಾಮಾನ್ಯವಾಗಿ ಈ ರೋಗಲಕ್ಷಣಗಳು 2 ರಿಂದ 7 ದಿನಗಳವರೆಗೆ ಇರುತ್ತದೆ. ಹೆಚ್ಚಿನ ಸೋಂಕಿತ ಜನರಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಂಭವ ಕಡಿಮೆ.

ಝಿಕಾ ವೈರಸ್ ಸೊಳ್ಳೆ ಕಡಿತದಿಂದ ಹರಡುತ್ತದೆ. ಗರ್ಭಿಣಿ ಮಹಿಳೆಯಿಂದ ಭ್ರೂಣಕ್ಕೆ ಹರಡುತ್ತದೆ.‌ ಲೈಂಗಿಕ ಸಂಪರ್ಕ ಮತ್ತು ರಕ್ತ ವರ್ಗಾವಣೆಯ ಮೂಲಕ ಸಹ ಹರಡುತ್ತದೆ.

ಡಬ್ಲ್ಯುಎಚ್‌ಒ ಪ್ರಕಾರ, ರಕ್ತ ಅಥವಾ ಮೂತ್ರ ಅಥವಾ ವೀರ್ಯದಂತಹ ಇತರ ದೇಹದ ದ್ರವಗಳನ್ನು ಪ್ರಯೋಗಾಲಯದಲ್ಲಿ ಝಿಕಾ ವೈರಸ್ ಪತ್ತೆ ಹಚ್ಚಲು ಪರೀಕ್ಷಿಸಲಾಗುತ್ತದೆ.

ಇಲ್ಲಿಯವರೆಗೆ, ಝಿಕಾ ವೈರಸ್‌ಗೆ ಲಸಿಕೆ ಅಥವಾ ಔಷಧವನ್ನು ಕಂಡುಹಿಡಿದಿಲ್ಲ. ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳುವುದು ಮಾತ್ರ ಇದಕ್ಕಿರುವ ಉತ್ತಮ ಮಾರ್ಗವಾಗಿದೆ.

ಝಿಕಾ ವೈರಸ್‌ ಕಾಣಿಸಿಕೊಂಡಾಗ

ಉತ್ತಮ ವಿಶ್ರಾಂತಿ ತೆಗೆದುಕೊಳ್ಳಬೇಕು

ಜ್ವರ ಮತ್ತು ನೋವಿಗೆ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು

ದ್ರವ ಪಾನೀಯಗಳನ್ನು ಹೆಚ್ಚಾಗಿ ಕುಡಿಯಬೇಕು

ಯಾವುದೇ ಔಷಧಿ ತೆಗೆದುಕೊಳ್ಳುವ ಮೊದಲು, ದಯವಿಟ್ಟು ವೈದ್ಯರನ್ನು ಸಂಪರ್ಕಿಸಿ
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

https://twitter.com/SaakshaTv/status/1421675136722276356?s=19

https://twitter.com/SaakshaTv/status/1421661026471321603?s=19

https://twitter.com/SaakshaTv/status/1421297706144866314?s=19

https://twitter.com/SaakshaTv/status/1421267522712649730?s=19

#Importantinformation #zikavirus

Tags: zika virus
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram