ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೆಪ್ಟೆಂಬರ್ 16ರಂದು ನಡೆಯಲಿರುವ ಮುಂದಿನ ವಿಚಾರಣೆಯವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲು ನ್ಯಾಯಾಲಯ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.
ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಅವರ ಕುಟುಂಬಸ್ಥರು ಹಾಗೂ ಬೆಂಬಲಿಗರು ಹಲವು ತಿಂಗಳಿಂದ ಆತಂಕ ವ್ಯಕ್ತಪಡಿಸುತ್ತಿದ್ದರು. ಈ ನಡುವೆ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳೂ ಹರಿದಾಡಿದ್ದವು.
ಇದೀಗ ಆಸ್ಪತ್ರೆಗೆ ಸ್ಥಳಾಂತರಿಸಿರುವುದರಿಂದ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅವರ ಕುಟುಂಬ ಹಾಗೂ ಬೆಂಬಲಿಗರು ವೈದ್ಯಕೀಯ ಚಿಕಿತ್ಸೆಯ ಕುರಿತು ಹೆಚ್ಚಿನ ಪಾರದರ್ಶಕತೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.







