ನವದೆಹಲಿ : ಭಾರತದಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 58 ಲಕ್ಷ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ ಕಳೆದ 24 ಗಂಟೇಲಿ 86,052 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ 1,141 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 81,177 ಮಂದಿ ಗುಣಮುಖರಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 58,18,571 ಕ್ಕೆ ಸಾವಿನ ಸಂಖ್ಯೆ ಕೂಡ 92,290ಕ್ಕೆ ಏರಿಕೆಯಾಗಿದೆ.
58,18,571 ಮಂದಿ ಸೋಂಕಿತರ ಪೈಕಿ ಈ ವರೆಗೂ ದೇಶದಲ್ಲಿ 47,56,165 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 9,70,116 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








