ಬೆಂಗಳೂರು: ಯಾವುದೇ ಸಂದರ್ಭದಲ್ಲಿಯಾದರೂ ನಿಗಮ ಮಂಡಳಿ ನೇಮಕ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷಣದಲ್ಲಿ ಬೇಕಾದರೂ ಆಯ್ಕೆ ಪಟ್ಟಿ ಪ್ರಕಟ ಆಗಬಹುದು. ಪಟ್ಟಿ ಬಿಡುಗಡೆಯಾಗುವ ಸಮಯವನ್ನು ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.