ಬೆಂಗಳೂರಿನಲ್ಲಿ ಸರಣಿ ಅಪಘಾತ ಒರ್ವ ಸಾವು ಮತ್ತೊಬ್ಬ ಗಂಭೀರ
ಬೆಂಗಳೂರಿನಲ್ಲಿ ಇಂದು ಕಾರು ಎರಡು ಆಟೋ, ಎರಡು ಮಿನಿ ಲಾರಿಗಳ ನಡುವೆ ಭೀಕರ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಂದಿರಾ ನಗರದ 80 ಫೀಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆನ್ಜ್ ಕಾರು ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ. ಓವರ್ ಸ್ಪೀಡ್ ಆಗಿ ಬಂದ ಬೆನ್ಜ್ ಕಾರು ಎರಡು ಆಟೋ, ಎರಡು ಮಿನಿ ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಚಾಲಕರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.








