National: ಇತಿಹಾಸದಲ್ಲೇ ಮೊದಲ ಬಾರಿಗೆ ಸೂರ್ಯಾಸ್ತದ ಬಳಿಕ ಕೆಂಪುಕೋಟೆಯಲ್ಲಿ ಭಾಷಣ ಮಾಡಲಿರುವ ಮೋದಿ

1 min read
PM Modi Saaksha Tv

ಇತಿಹಾಸದಲ್ಲೇ ಮೊದಲ ಬಾರಿಗೆ ಸೂರ್ಯಾಸ್ತದ ಬಳಿಕ ಕೆಂಪುಕೋಟೆಯಲ್ಲಿ ಭಾಷಣ ಮಾಡಲಿರುವ ಮೋದಿ

ನವದೆಹಲಿ: ಗುರು ತೇಗ್‌ ಬಹಾದ್ದೂರ್‌ ಅವರ 400ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 9:30ಕ್ಕೆ ದೇಶವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ.

ಈ ಮೂಲಕ ಪ್ರಧಾನಿ ಮೋದಿ ಸಂಪ್ರದಾಯ ಮುರಿದು ಇದೇ ಮೊದಲ ಬಾರಿಗೆ ಸೂರ್ಯಾಸ್ತದ ಬಳಿಕ ಐತಿಹಾಸಿಕ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ. ಇಂದಿನ ಕಾರ್ಯಕ್ರಮದ ವಿಶೇಷವೆಂದರೆ ಪ್ರಧಾನಿ ಮೋದಿ ಕೆಂಪು ಕೋಟೆಯ ಮೇಲೆ ಭಾಷಣ ಮಾಡದೇ ಹುಲ್ಲುಹಾಸಿನ ಮೇಲೆ ಮಾತನಾಡುತ್ತಿದ್ದಾರೆ.

1675ರಲ್ಲಿ ಸಿಖ್ ಸಮುದಾಯದ 9ನೇ ಗುರು ಗುರು ತೇಗ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಶಾಂತಿ ಮೂಡಿಸುವ ಬಗ್ಗೆ ಭಾಷಣವಿರಲಿದೆ ಎಂದು ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿಗಳು ಕೆಂಪುಕೋಟೆಯ ಮೇಲೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದು ಸಂಪ್ರದಾಯ. ಸ್ವಾತಂತ್ರ್ಯ ದಿನ ಹೊರತು ಪಡಿಸಿ ಎರಡನೇ ಬಾರಿಗೆ ದಿ ಕೆಂಪುಕೋಟೆಯಿಂದ ಭಾಷಣ ಮಾಡುತ್ತಿದ್ದಾರೆ.

ಇಂದು ರಾತ್ರಿ 400 ಸಿಖ್ ಸಂಗೀತಗಾರಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೋದಿ ಅವರು ಅಂಚೆ ಸ್ಟಾಂಪ್ ಮತ್ತು ಸ್ಮರಣಾರ್ಥ ನಾಣ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 11 ಮುಖ್ಯಮಂತ್ರಿಗಳು ಸೇರಿದಂತೆ ರಾಷ್ಟ್ರದ ವಿವಿಧೆಡೆಯಿಂದ ಸಿಖ್‌ ಪ್ರಮುಖರು ಭಾಗಿಯಾಗಲಿದ್ದಾರೆ. 400 ಸಿಖ್‌ ಜಥೆದಾರ್‌ ಕುಟುಂಬಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd