ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ಟಾಸ್ಕ್ ಫೋರ್ಸ್ ಕಮಿಟಿ ಸಭೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಲ್ಲಿ ನಡೆಯಲಿರುವ ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಅಥವಾ ನಾಳೆಗೆ ಕೊನೆಗೊಳಿಸುವುದು, ಆಯುರ್ವೇದ ಚಿಕಿತ್ಸೆ, ತಜ್ಞರು ನೀಡಿರುವ ವರದಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ.
ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ನೀಡಿರುವ ಔಷಧಿಯ ಬಳಕೆ ಮಾಡಬೇಕೋ ಬೇಡವೋ ಅಥವಾ ಆಯುರ್ವೇದ ಔವಧಿಯನ್ನು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಔಷಧ ಬಳಕೆ ಮಾಡಬೇಕೇ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಸಚಿವರಾದ ಡಾ.ಕೆ ಸುಧಾಕರ್, ಶ್ರೀರಾಮುಲು, ಡಿಸಿಎಂ ಅಶ್ವತ್ಥ ನಾರಾಯಣ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು, ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಮಾಡಲಾದ ಒಂದು ವಾರದ ಲಾಕ್‍ಡೌನ್‍ನಿಂದ ಆಗಿರುವ ಪ್ರಯೋಜನಗಳು, ಸಿದ್ದತೆ, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ.
cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!
800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...








