ಬೆಂಗಳೂರು : ರಾಜ್ಯದಲ್ಲಿ ಕೊರೊನಾಸುರನ ಅಬ್ಬರ ಮುಂದುವರಿದಿದ್ದು, ಇಂದು ಹೊಸದಾಗಿ 8 ಕೊರೊನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಸೋಂಕಿನ ಪ್ರಕರಣ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಬೆಂಗಳೂರು ನಗರದಲ್ಲಿ ಒಬ್ಬರಿಗೆ, ಗದಗದಲ್ಲಿ ಒಬ್ಬರಿಗೆ ಮತ್ತು ಕಲಬುರ್ಗಿಯಲ್ಲಿ ಆರು ಜನರಿಗೆ ಕೊರೊನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ.
ಅಂದಹಾಗೇ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಇದುವರೆಗೆ 20 ಜನರು ಸಾವನ್ನಪ್ಪಿದ್ದಾರೆ. 198 ಜನರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.