ನಾವು ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ಕಾಯ್ದೆ ರದ್ದು : ಸಿದ್ದರಾಮಯ್ಯ Siddaramaiah
ಬೆಂಗಳೂರು : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಭರವಸೆ ನೀಡಿದ್ದಾರೆ.
ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ.
ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? 2/3#AntiConversionBill— Siddaramaiah (@siddaramaiah) December 27, 2021
ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಪ್ರಶ್ನಿಸಿದ್ದಾರೆ.
2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್. ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.








