ರಾಜ್ಯದಲ್ಲಿ ಶಾಲೆ – ಕಾಲೇಜು ಎರಡು ವಾರಗಳ ಮಟ್ಟಿಗೆ ಬಂದ್ ?

1 min read
school to close

ರಾಜ್ಯದಲ್ಲಿ ಶಾಲೆ – ಕಾಲೇಜು ಎರಡು ವಾರಗಳ ಮಟ್ಟಿಗೆ ಬಂದ್ ?

ಬೆಂಗಳೂರು, ಮಾರ್ಚ್21: ರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ ಹಿನ್ನೆಲೆಯಲ್ಲಿ  ಎರಡು ವಾರಗಳ ಮಟ್ಟಿಗೆ ಶಾಲೆ – ಕಾಲೇಜುಗಳನ್ನು ಬಂದ್‌ ಮಾಡಬೇಕು ಎಂದು ಆರೋಗ್ಯ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಹೇಳಲಾಗಿದೆ.
school and college remain close

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎರಡು ವಾರಗಳ ಮಟ್ಟಿಗೆ ಶಾಲೆ – ಕಾಲೇಜು, ಜಿಮ್‌, ಈಜುಕೊಳಗಳನ್ನು ಮುಚ್ಚುವುದರೊಂದಿಗೆ ಹಲವು ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಹೊಸ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಆರೋಗ್ಯ ತಜ್ಞರು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಅವರಿಗೆ ಹಲವು ಕಠಿಣ ಕ್ರಮಗಳನ್ನು ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಜ್ಞರ ಶಿಫಾರಸುಗಳ ಬಗ್ಗೆ ಸಿಎಂ ಮತ್ತು ಸಂಬಂಧಪಟ್ಟ ಇಲಾಖೆಗಳ ಸಚಿವರೊಂದಿಗೆ ಚರ್ಚಿಸಿ ಮುಂದಿನ ವಾರ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿದೆ.

ಮತ್ತೆ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಶಾಲೆ – ಕಾಲೇಜುಗಳು, ಜಿಮ್‌, ಈಜುಕೊಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ 2 ವಾರ ಬಂದ್‌ ಮಾಡಬೇಕು. ಒಳಾಂಗಣ ಕಾರ್ಯಕ್ರಮಗಳಿಗೆ 100 ಮಂದಿಗೆ ಮತ್ತು ಹೊರಾಂಗಣ ಕಾರ್ಯಕ್ರಮಗಳಿಗೆ 200 ಮಂದಿಗೆ ಮಾತ್ರ ಅವಕಾಶ ನೀಡಬೇಕು ಹಾಗೂ ಸಿನೆಮಾ ಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಿತಿ ವಿಧಿಸಬೇಕು ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ ಎಂದು ಹೆಸರು ಹೇಳಲಿಚ್ಛಿಸದ ತಜ್ಞರೊಬ್ಬರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
ರಾಜ್ಯದಲ್ಲಿ ಸೋಂಕು ಪ್ರಕರಣಗಳು ದುಪ್ಪಟ್ಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ವಾರ ಈ ಕಠಿನ ಕ್ರಮಗಳು ಜಾರಿಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ತಿಳಿಸಿದೆ.
school to close

ತಜ್ಞರ ತಾಂತ್ರಿಕ ಸಲಹಾ ಸಮಿತಿ ಸಭೆಯು ಶುಕ್ರವಾರ ರಾತ್ರಿ
ನಡೆದಿದ್ದು, ಶಿಫಾರಸು ಜಾರಿ ಸಾಧ್ಯತೆಗಳನ್ನು ಅವಲೋಕಿಸಿ, ಒಂದೆರಡು ದಿನಗಳಲ್ಲಿ ಸುತ್ತೋಲೆ ಹೊರಡಿಸುವ ಸಂಭವವಿದೆ. ರಾಜ್ಯದಲ್ಲಿ ಶನಿವಾರ 1,798 ಮಂದಿಗೆ ಸೋಂಕು ತಗಲಿದ್ದು, ಏಳು ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd