ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾಕ್ಕೆ 127 ಜನರು ಬಲಿ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,761 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದಿನದ ಏರಿಕೆ ಪ್ರಮಾಣವು 0.41 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 0.41ರಷ್ಟಿದೆ. ಹಾಗೇ 3,196 ಜನರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣವು 98.74 ರಷ್ಟಿದೆ. ಸಕ್ರೀಯ ಪ್ರಕರಣಗಳು 26,240 ಇದೆ. ಇದು ಶೇ 0.06 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕೊರೊನಾಕ್ಕೆ 127 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕಳೆದ 24 ಗಂಟೆಯಲ್ಲಿ 4,31,973 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಇಲ್ಲಿಯವರೆಗೆ 181.21 ಕೋಟಿ ಕೊರೊನಾ ಲಸಿಕೆಗಳನ್ನು ಹಾಕಲಾಗಿದೆ.