ಈಗಾಗಲೇ ರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಮುಂದೆಯೂ ಮಳೆಯ ಮುನ್ಸೂಚನೆ ಇರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ.
ಅಕ್ಟೋಬರ್ 21ರಿಂದ ಮತ್ತೆ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.