ಚಿತ್ರದುರ್ಗ: ಇನ್ನೆರಡು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ವಿಶ್ವಾಸದಲ್ಲಿದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಮ್ಯೂಸಿಯಂ ಲೋಕಾರ್ಪಣೆಗೆ ಆಗಮಿಸಿದ್ದ ಬಿಎಸ್ವೈ, ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಬಳಿ ಇವತ್ತು ಸಾಧ್ಯವಾದರೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಅವರನ್ನು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದ ಅವರು ನಾಯಕತ್ವ ಬದಲಾವಣೆ ಹಾಗೂ ವಲಸೆ ಶಾಸಕರ ಪ್ರತ್ಯೇಕ ಸಭೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಸಾಧ್ಯವಾದರೆ ವರಿಷ್ಠರ ಜತೆ ಮಾತನಾಡುವೆ ಎಂಬ ಬಿಎಸ್ವೈ ಹೇಳಿಕೆ ಅರ್ಥವೇನು..!
ಕಳೆದ ಒಂದು ವಾರದಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಒಂದೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳುತ್ತಲೇ ಬಂದಿದ್ದಾರೆ. ಅವರು ಹೇಳಿದ ಒಂದೆರಡು ದಿನಗಳು ಕಳೆದು ಎರಡು ವಾರಗಳೇ ಕಳೆದಿವೆ. ಆದ್ರೆ, ಬಿಜೆಪಿ ಹೈಕಮಾಂಡ್ ಮಾತ್ರ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡುತ್ತಲೇ ಇಲ್ಲ.`
ಚಿತ್ರದುರ್ಗದಲ್ಲಿ ಮಾತನಾಡಿರುವ ಬಿಎಸ್ವೈ, `ಸಂಜೆ ಸಾಧ್ಯವಾದರೆ’ ವರಿಷ್ಠರ ಬಳಿ ಮಾತನಾಡುತ್ತೇನೆ ಎಂಬ ಹೇಳಿಕೆಯೂ ಕೂಡ ಸದ್ಯಕ್ಕೆ ಸಂಪುಟ ವಿಸ್ತರಣೆ ಡೌಟ್ ಎಂಬುದನ್ನು ಸೂಚಿಸುತ್ತದೆ. ಸಂಪುಟ ವಿಸ್ತರಣೆ ಸಂಬಂಧ ಎರಡು ಬಾರಿ ಯಡಿಯೂರಪ್ಪ ದೆಹಲಿಗೆ ಹೋಗಿ ಬಂದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಮಾತನಾಡುತ್ತೇನೆ ಎಂದು ಹೇಳಿದ ಕೂಡಲೇ ಮುಗಿಯುವುದಿಲ್ಲ.
ಮೂಲಗಳ ಪ್ರಕಾರ ಸದ್ಯದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದು ಅನುಮಾನ ಎನ್ನಲಾಗುತ್ತಿದೆ. ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾದರೆ ಮತ್ತೆ ಸಚಿವ ಸಂಪುಟ ವಿಸ್ತರಣೆ ನೆನೆಗುದಿಗೆ ಬೀಳಲಿದೆ. ಇದಕ್ಕೆ ಅರಿತೇ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡುತ್ತಿಲ್ಲವೇ ಎಂಬ ಅನುಮಾನ ಕಾಡುತ್ತಿದೆ.
ವರಿಷ್ಠರು ಸಂಪುಟ ವಿಸ್ತರಣೆಗೆ ಕೊಕ್ಕೆ ಹಾಕುತ್ತಿದ್ದಂತೆ ವೀರಶೈವ-ಲಿಂಗಾಯತ ಮೀಸಲಾತಿ ದಾಳ ಉರುಳಿಸಿದ್ದ ಯಡಿಯೂರಪ್ಪ, ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಹೈಕಮಾಂಡ್ಗೆ ಟಾಂಗ್ ಕೊಟ್ಟಿದ್ದರು. ಲಿಂಗಾಯತ ಮೀಸಲಾತಿ ದಾಳಕ್ಕೆ ಬೆಚ್ಚಿಬಿದ್ದಿರುವ ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರ ಬೇಡಿಕೆಗೆ ಮಣಿಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel