ಬೆಂಗಳೂರು 130 ಹಾಸಿಗೆಗಳ ಚರಕ ಸೂಪರ್ ಸ್ಪೆಷಾಲಿಟಿ ಕೋವಿಡ್ ಆಸ್ಪತ್ರೆ ಉದ್ಘಾಟನೆ
ಬೆಂಗಳೂರು, ಅಗಸ್ಟ್ 27: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಎರಡು ಲಕ್ಷಕ್ಕೂ ಹೆಚ್ಚು ಕೊರೋನಾ ಸೋಂಕಿತರು ಡಿಸ್ಚಾರ್ಜ್ ಆಗಿದ್ದು ಕರ್ನಾಟಕದಲ್ಲಿ ಚೇತರಿಕೆ ಪ್ರಮಾಣ ಸುಧಾರಿಸುತ್ತಿದೆ ಮತ್ತು ಶೇಕಡಾ 70 ರಷ್ಟಿದೆ ಎಂದು ಹೇಳಿದರು. ಶೇಕಡಾ 1.69 ರಷ್ಟು ಮರಣ ಪ್ರಮಾಣದೊಂದಿಗೆ, ರಾಜ್ಯದ ಕೋವಿಡ್ ಪರಿಸ್ಥಿತಿ ಉತ್ತಮಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಶಿವಾಜಿನಗರದ 130 ಹಾಸಿಗೆಗಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅವರು ಉದ್ಘಾಟಿಸಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ ನಾರಾಯಣ್, ಮೇಯರ್ ಎಂ.ಗೌತಮ್ ಕುಮಾರ್, ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.
ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಡಾ.ಕೆ.ಸುಧಾಕರ್ ನಾಲ್ಕು ವರ್ಷಗಳಿಂದ ಖಾಲಿ ಇದ್ದ ಬಿಬಿಎಂಪಿಯ ಕಟ್ಟಡದಲ್ಲಿ 20-25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುವ ಆಲೋಚನೆ ಬಂದಿತ್ತು.
ಕೋವಿಡ್ ಸಂಕಷ್ಟ ಸಮಯದಲ್ಲಿ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ನಮ್ಮ ಮನವಿಗೆ ತಕ್ಷಣ ಸ್ಪಂದಿಸಿ 11 ಕೋಟಿ ರೂ. ಮೌಲ್ಯದ ಉಪಕರಣಗಳನ್ನು ನೀಡಿದರು ಎಂದು ಡಾ.ಕೆ.ಸುಧಾಕರ್ ಹೇಳಿದರು.
ಹೊಸ ಕೋವಿಡ್ ಆಸ್ಪತ್ರೆಯನ್ನು 24.38 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗಿದ್ದು, ಅದರಲ್ಲಿ 11 ಕೋಟಿ ರೂ.ಗಳನ್ನು ಇನ್ಫೋಸಿಸ್ ಫೌಂಡೇಶನ್ ನೀಡಿದೆ. ಯಡಿಯೂರಪ್ಪ ಎಲ್ಲಾ ಕೋವಿಡ್ ವೀರರ ಪ್ರಯತ್ನವನ್ನು ಶ್ಲಾಘಿಸಿದರು.
ಸಾಮಾನ್ಯವಾಗಿ, ಅಂತಹ ಸೌಲಭ್ಯವನ್ನು ರಚಿಸಲು ಒಂದು ವರ್ಷ ಅಥವಾ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದ ಅರ್ಷದ್ ಇದನ್ನು ಕೇವಲ ನಾಲ್ಕು ತಿಂಗಳಲ್ಲಿ ನಿರ್ಮಿಸಲಾಯಿತು ಎಂದರು. ನಾಲ್ಕು ಅಂತಸ್ತಿನ ಆಸ್ಪತ್ರೆಯಲ್ಲಿ 130 ಸಾಮಾನ್ಯ ಹಾಸಿಗೆಗಳು, 20 ಐಸಿಯು ಹಾಸಿಗೆಗಳು ಮತ್ತು 20 ವೆಂಟಿಲೇಟರ್ಗಳಿವೆ. ಇದನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯು ನಿರ್ವಹಿಸಲಿದ್ದು, 30 ವೈದ್ಯರು, 10 ತಜ್ಞರು, ಆಹಾರ ತಜ್ಞರು ಮತ್ತು ಫಾರ್ಮಸಿಸ್ಟ್‌ಗಳು ಇರುತ್ತಾರೆ.