ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ವಜ್ಞ ನಗರದಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್‌ ಮುಂದಾಳತ್ವದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರದ ಉದ್ಘಾಟನೆ

admin by admin
October 1, 2021
in Newsbeat, State, ರಾಜ್ಯ
KJ George saaksha tv
Share on FacebookShare on TwitterShare on WhatsappShare on Telegram

ಸರ್ವಜ್ಞ ನಗರದಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್‌ ಅವರ ಮುಂದಾಳತ್ವದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರದ ಉದ್ಘಾಟನೆ

ಬೆಂಗಳೂರು : ಕೈಗಾರಿಕೆಗಳಿಗೆ ಅಗತ್ಯವಿರುವ ಸಿದ್ದ ತರಬೇತಿಯನ್ನು ನೀಡುತ್ತಿರುವ ಪಠ್ಯಕ್ರಮ ಹೊಂದಿರುವ ದೇಶದ ಪ್ರಮುಖ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದು. ರಾಜ್ಯದಲ್ಲಿ ಯುವ ಜನಾಂಗಕ್ಕೆ ಉದ್ಯೋಗಾವಕಾಶ ಪಡೆದುಕೊಳ್ಳಲು ವಿಫುಲ ಅವಕಾಶಗಳನ್ನು ಕಲ್ಪಿಸಿದ್ದು, ಅದರ ಉಪಯೋಗ ಪಡೆದುಕೊಳ್ಳುವಂತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ ಸಿ.ಎನ್‌ ಅಶ್ವಥ್‌ನಾರಾಯಣ ಕರೆ ನೀಡಿದರು.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಇಂದು ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಂಬೆಸಿ ಗಾಲ್ಫ್‌ ಲಿಂಕ್ಸ್‌ ಬಿಸಿನೆಸ್‌ ಪಾರ್ಕ್‌ನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿರುವ ಮಾಜಿ ಸಚಿವ ಕೆ ಜೆ ಜಾರ್ಜ್‌ ಅವರು ಸಿಎಸ್‌ಆರ್‌ ನಿಧಿಯನ್ನು ಬಳಸಿಕೊಂಡು ನಿರ್ಮಿಸಿರುವ ಎರಡನೇ ಕೌಶಲ್ಯಾಭಿವೃದ್ದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲ ಬದಲಾದಂತೆ ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ದೇಶದ ಯುವ ಜನಾಂಗಕ್ಕೆ ಈ ಬಗ್ಗೆ ಸೂಕ್ತ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೌಶಲ್ಯಾಭಿವೃದ್ದಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿ ವರ್ಷ 20 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳ ನಿರ್ಮಾಣವಾಗುತ್ತಿದೆ ಎಂದರು.

ನಮ್ಮ ರಾಜ್ಯದ ಅದರಲ್ಲೂ ನಗರದ ಯುವಜನಾಂಗ ಇದರ ಉಪಯೋಗವನ್ನು ಹೆಚ್ಚು ಪಡೆದುಕೊಳ್ಳಬೇಕು. ರಾಜ್ಯ ಸರಕಾರ ರಾಜ್ಯದ 150 ಐಟಿಐ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳನ್ನು ಅಭಿವೃದ್ದಿಗೊಳಿಸಿದೆ. ಈ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ 41 ನೂತನ ಕೋರ್ಸ್‌ಗಳನ್ನು ಅಳವಡಿಸಲಾಗುತ್ತಿದೆ. ಈ ತರಬೇತಿಯ ಪಠ್ಯಕ್ರಮ ಕೈಗಾರಿಕಾ ಸಿದ್ದವಾದಂತಹದ್ದಾಗಿದ್ದು, ಇಂತಹ ಪಠ್ಯಕ್ರಮ ಅಳವಡಿಸಿಕೊಂಡಿರುವ ಪ್ರಮುಖ ರಾಜ್ಯ ಎನ್ನುವುದು ನಮ್ಮ ಹೆಗ್ಗಳಿಕೆಯಾಗಿದೆ. ಈ ಶೈಕ್ಷಣಿಕ ಸಂಸ್ಥೆಗಳಲ್ಲಿ ಶುಲ್ಕ ಬಹಳ ಕಡಿಮೆಯಿದ್ದು, ಸರಕಾರದ ವತಿಯಿಂದ ಪ್ರತಿವರ್ಷ ಪ್ರತಿಯೊಬ್ಬ ವಿದ್ಯಾರ್ಥಿ ಮೇಲೆ ಸುಮಾರು 3 ಲಕ್ಷರೂಪಾಯಿಗಳ ವೆಚ್ಚವನ್ನು ಮಾಡಲಾಗುತ್ತದೆ. ಸರ್ವಜ್ಞ ನಗರದಲ್ಲಿ ಆರಂಭವಾಗಿರುವಂತಹ ಕೌಶಲ್ಯಾಭಿವೃದ್ದಿ ಕೇಂದ್ರಗಳು ಪ್ರಸ್ತುತ ಸನ್ನಿವೇಶದಲ್ಲಿ ಉದ್ಯೋಗ ಪಡೆಯಲು ಹಾಗೂ ಉದ್ಯೋಗದಲ್ಲಿ ಅಭಿವೃದ್ದಿಯನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಯೋಜನವಾಗಲಿವೆ ಎಂದು ಹೇಳಿದರು.

KJ George saaksha tv

ಮಾಜಿ ಸಚಿವ ಮತ್ತು ಸರ್ವಜ್ಞ ನಗರ ಶಾಸಕರಾಗಿರುವ ಕೆ.ಜೆ ಜಾರ್ಜ್‌ ಮಾತನಾಡಿ, ಯುವಕರು ಹಾಗೂ ನಮ್ಮ ನಗರದ ಕಾರ್ಮಿಕ ವರ್ಗದವರಿಗೆ ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ಅವರ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಅಲ್ಲದೆ, ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅನುಕೂಲವಾಗುತ್ತವೆ. ಕರೋನಾ ನಂತರದ ಬದಲಾವಣೆಗಳಲ್ಲಿ ಹಲವಾರು ಜನರು ಪ್ರಾಥಮಿಕವಾಗಿ ತಮ್ಮ ಜೀವನಕ್ಕೆ ಅವಲಂಬಿತರಾಗಿದ್ದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ, ಹೊಸ ಉದ್ಯೋಗಕ್ಕೆ ಅವರಿಗಿದ್ದ ಕೌಶಲ್ಯಗಳಲ್ಲಿ ಕೊರತೆ ಉಂಟಾಗುವುದನ್ನು ನಾವು ಗಮನಿಸಿದೆವು. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಅದರಲ್ಲಿ ಸಫಲರಾಗಿದ್ದೇವೆ ಎಂದರು.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿಯಲ್ಲಿ ಇಂದು ಉದ್ಘಾಟನೆಯಾಗಿರುವುದು ಎರಡನೇ ಕೌಶಲ್ಯಾಭಿದ್ದಿ ಕೇಂದ್ರವಾಗಿದೆ. ಕೌಶಲ್ಯಾಭಿವೃದ್ದಿ ತರಬೇತಿ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಾನ್‌ ಬಾಸ್ಕೋ ಟೆಕ್‌ ಸೋಸೈಟಿ ಸಂಯುಕ್ತಾಶ್ರಯದಲ್ಲಿ, ಈ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ರೆಫ್ರೆಜರೇಶನ್‌ ಮತ್ತು ಏರ್‌ ಕಂಡೀಷನರ್‌ ತಾಂತ್ರಿಕ ತರಬೇತಿ, ಎಲೆಕ್ಟ್ರಕಿಕ್‌ ಟೆಕ್ನೀಶಿಯನ್‌ ತರಬೇತಿ ಹಾಗೂ ಕಂಪ್ಯೂಟರ್‌ ತರಬೇತಿಯ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದೇವೆ. ತರಬೇತಿಯ ನಂತರ ಅವರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆ.ಜೆ. ಜಾರ್ಜ್‌ ಹೇಳಿದರು.

ಕಾರ್ಯಕ್ರಮದಲ್ಲಿ ಸರ್ವಜ್ಞ ನಗರ ಶಾಸಕ ಹಾಗೂ ಮಾಜಿ ಸಚಿವರಾದ ಕೆ ಜೆ ಜಾರ್ಜ್‌, ಸಂಸದ ಪಿ ಸಿ ಮೋಹನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ಗೌರವ್‌ ಗುಪ್ತಾ, ಕರ್ನಾಟಕ ಓಲಂಪಿಕ್‌ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗೋವಿಂದರಾಜ್‌, ಪರಿಷತ್‌ ಸದಸ್ಯರಾದ ರಮೇಶ್‌ ಗೌಡ ಉಪಸ್ಥಿತರಿದ್ದರು.

Tags: #Saaksha TVashwath narayanbangalore
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram