ನವದೆಹಲಿ: ಅಶುಭ ದಿನದಂದು ಅಯೋಧ್ಯೆಯಲ್ಲಿ ರಾಮಮಂದಿರ ಶಿಲ್ಯಾನ್ಯಾಸ ನಡೆಯುತ್ತಿದೆ. ಹೀಗಾಗಿ ಈಗಲಾದರೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಿಲಾನ್ಯಾಸ ಕಾರ್ಯಕ್ರಮ ಮುಂದೂಡಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಟ್ವೀಟ್ ವಿವಾದದ ಕಿಡಿ ಹೊತ್ತಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರೇ ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ ಮಾಡುತ್ತಿದ್ದೀರಿ. ನೀವು ಅಶುಭ ಮುಹೂರ್ತದಲ್ಲಿ ಶಿಲಾನ್ಯಾಸ ಮಾಡಿ ಎಷ್ಟು ಜನರನ್ನು ಆಸ್ಪತ್ರೆಗೆ ಸೇರಿಸಲು ಹೊರಟಿದ್ದೀರಿ ಎಂದು ಟ್ವಿಟರ್‍ನಲ್ಲಿ ಪ್ರಶ್ನಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರೇ ನೀವಾದರೂ ಮೋದಿ ಅವರಿಗೆ ಹೇಳಿ, ಸನಾತನ ಧರ್ಮಕ್ಕೆ ಕಳಂಕ ತರುವ ಅಶುಭ ಮುಹೂರ್ತದಲ್ಲೇ ಏಕೆ ಶಿಲಾನ್ಯಾಸ ಮಾಡುತ್ತಿದ್ದೀರಿ. ಇದರಿಂದ ನಿಮಗೆ ಆಗುವ ಲಾಭವಾದರೂ ಏನು. ನೂರಾರು ವರ್ಷಗಳ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರಕ್ಕೆ ಶಿಲಾನ್ಯಾಸ ಮಾಡುವ ಯೋಗ ಬಂದಿದೆ.
ಗೃಹ ಸಚಿವ ಅಮಿತ್ ಶಾ ಕೊರೊನಾ ಪಾಸಿಟಿವ್‍ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ಕೊರೊನಾಗೆ ಬಲಿಯಾಗಿದ್ದಾರೆ. ಸಾವಿರಾರು ಜನರ ಮೇಲೆ ಕೊರೊನಾ ಅಟ್ಟಹಾಸ ಮುಂದುವರೆದೇ ಇದೆ. ಇಂತಹ ಸಂದರ್ಭದಲ್ಲಿ ಶಿಲಾನ್ಯಾಸ ಮಾಡುವ ಅಗತ್ಯವಿತ್ತೇ ಎಂದು ದಿಗ್ವಿಜಯ್ ಟ್ವಿಟರ್‍ನಲ್ಲಿ 6 ಕಾರಣಗಳನ್ನು ಮುಂದಿಟ್ಟಿದ್ದಾರೆ.