ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು 5503 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1.12ಲಕ್ಷಕ್ಕೆ ಏರಿಕೆಯಾಗಿದೆ.
ಇಂದು 2397 ಮಂದಿ ಆಸ್ಪತ್ರೆಗಳಿಂದ ಡಿಶ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 42,901 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಶ್ಚಾರ್ಜ್ ಆಗಿದ್ದಾರೆ.
ಇಂದು 92 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 2147ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 67,448 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಇಂದು 2270 ಮಂದಿಗೆ ಕೊರೊನಾ ವಕ್ಕರಿಸಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಇಂದು 30 ಮಂದಿ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 987ಕ್ಕೆ ಏರಿಕೆಯಾಗಿದೆ.
ಕಲಬುರಗಿ, ದಕ್ಷಿಣ ಕನ್ನಡದಲ್ಲಿ ಮೃತ್ಯು ಕೇಕೆ..!
ಬಳ್ಳಾರಿ ಹಾಗೂ ಬೆಳಗಾವಿಯಲ್ಲಿ ಕೊರೊನಾ ಕೇಕೆ ಹಾಕುತ್ತಿದೆ. ಬಳ್ಳಾರಿಯಲ್ಲಿ 338 ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 279 ಮಂದಿಗೆ ಕೊರೊನಾ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಹಾಗೂ ಕಲಬುರಗಿಯಲ್ಲಿ ಕೊರೊನಾ ಸಾವಿನ ಕೇಕೆ ಮೊಳಗಿಸಿದ ಕೊರೊನಾ, ದಕ್ಷಿಣ ಕನ್ನಡದಲ್ಲಿ 7 ಮಂದಿ ಅಸು ನೀಗಿದ್ದರೆ, ಕಲಬುರಗಿಯಲ್ಲಿ 10 ಮಂದಿ ಬಲಿಯಾಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 200 ಜನರಿಗೆ ಪಾಸಿಟಿವ್ ಬಂದಿದೆ. ದಾವಣೆಗೆರೆಯಲ್ಲಿ 225 ಹಾಗೂ ಧಾರವಾಡದಲ್ಲಿ 175, ಉಡುಪಿಯಲ್ಲಿ 173 ಮಂದಿಗೆ ಕೊರೊನಾ ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ 131 ಮಂದಿಗೆ ಹೆಮ್ಮಾರಿ ವಕ್ಕರಿಸಿದೆ.








