ನಿಲ್ಲದ ಮಳೆ ಆರ್ಭಟ, ಹಲವು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮೈಸೂರು ಮತ್ತು ಶಿವಮೊಗ್ಗ ದ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯೂ ಜೋರು ಮಳೆ ಸುರಿಯುತ್ತಿದ್ದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳಿಗೆ ಇಂದು (ಮೇ19) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅಂಗನವಾಡಿಗಳಿಗೂ ಸಹಿತ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಮೈಸೂರು ಜಿಲ್ಲೆಯಾದ್ಯಂತ 3 – 4 ದಿನಗಳಿಂದ ಮಳೆ ಸುರಿಯುತ್ತಿದೆ. ರಜೆ ದಿನದ ಕರ್ತವ್ಯವನ್ನ ಮುಂದಿನ ರಜಾ ದಿನಗಳಲ್ಲಿ ನಿರ್ವಹಿಸಬೇಕು ಎಂಬ ಆದೇಶದ ಮೇರೆಗೆ ಒಂದರಿಂದ 10ನೇ ತರಗತಿವರೆಗೆ ರಜೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.