ಆನೇಕಲ್: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಮಾಯಸಂದ್ರದ ಹತ್ತಿರ ಈ ಘಟನೆ ನಡೆದಿದೆ. ಬೆಸ್ತಮಾನಹಳ್ಳಿಯ ರೌಡಿಶೀಟರ್ ಲೋಕೇಶ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿಯು ಗ್ರಾಮದ ಮನೋಜ್ ಎಂಬುವವರ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ. ಆದರೆ, ಆತ ಊರಿಗೆ ಬರುತ್ತಿರುವ ಮಾಹಿತಿಯು ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರ ತಂಡ ತೆರಳಿತ್ತು. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಲೆ ಮರೆಸಿಕೊಳ್ಳಲು ಮುಂದಾಗಿದ್ದ. ಆಗ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಪೊಲೀಸರು ಹಾಗೂ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.








