Income Tax : ಆದಾಯ ತೆರಿಗೆ ಮಿತಿ 5 ಲಕ್ಷಕ್ಕೆ ಹೆಚ್ಚಾಗುವ ಸಾಧ್ಯತೆ…
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನ ಹೆಚ್ಚಿಸಲಾಗುತ್ತಿದೆ. ಮುಂಬರುವ 2023-2024ರ ಬಜೆಟ್‌ನಲ್ಲಿ ಐಟಿ ವಿನಾಯಿತಿ ಮಿತಿಯನ್ನ ಪ್ರಸ್ತುತ ರೂ.2.5 ಲಕ್ಷದಿಂದ ರೂ.5 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ ಎಂದು ಸಂಬಂಧಿತ ಮೂಲಗಳು ಬಹಿರಂಗಪಡಿಸಿವೆ.
ಪ್ರಸ್ತುತ ರೂ.2.5 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಇಲ್ಲ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರೂ.3 ಲಕ್ಷದವರೆಗೆ ಮತ್ತು 80 ವರ್ಷ ಮೇಲ್ಪಟ್ಟ ಸೂಪರ್ ಸೀನಿಯರ್ ಸಿಟಿಜನ್‌ಗಳಿಗೆ ರೂ.5 ಲಕ್ಷದವರೆಗೆ ತೆರಿಗೆ ವಿನಾಯಿತಿ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಅನ್ನು ಮಂಡಿಸುವ ನಿರೀಕ್ಷೆಯಿದೆ.
Income Tax: Income tax limit is likely to increase to 5 lakhs.