ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ..!
ನವದೆಹಲಿ : ಕೇಂದ್ರ ಸರಕಾರವು 2020-21ನೇ ಸಾಲಿನ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು 2 ತಿಂಗಳು ವಿಸ್ತರಿಸಿದೆ.. ಕಂಪನಿಗಳ ಐಟಿಆರ್ ಸಲ್ಲಿಕೆಯ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.
ಆದಾಯತೆರಿಗೆ ಕಾನೂನಿಗೆ ಅನುಗುಣವಾಗಿ ಲೆಕ್ಕಪರಿಶೋಧನೆಯ ಅಗತ್ಯವಿಲ್ಲ ಹಾಗೂ ಐಟಿಆರ್-1 ಅಥವಾ ಐಟಿಆರ್-4 ಫಾರ್ಮ್ಗಳನ್ನು ಬಳಸಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ವ್ಯಕ್ತಿಗಳಿಗೆ ಜುಲೈ 31 ಅಂತಿಮಗಡುವಾಗಿತ್ತು. ಇದೀಗ ಈ ಅವಧಿಯನ್ನ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ತೆರಿಗೆಪಾವತಿದಾರರ ಕಂಪೆನಿಗಳ ಅಥವಾ ಸಂಸ್ಥೆಗಳ ಐಟಿ ರಿಟರ್ನ್ಸ್ ಸಲ್ಲಿಕೆಯ ಅಂತಿಮ ಗಡುವು ಅಕ್ಟೋಬರ್ 31 ಆಗಿದ್ದು, ಅದನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








