ರಾಜ್ಯದಲ್ಲಿ ಬಾಲ್ಯವಿವಾಹದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರಿವು ಮೂಡಿಸುತ್ತಿದ್ದರೂ ಬಾಲ್ಯವಿವಾಹ ಹೆಚ್ಚುತ್ತಿದೆ. ಕಳೆದ 5 ವರ್ಷಗಳಲ್ಲಿ 5860 ಬಾಲ್ಯವಿವಾಹಗಳನ್ನು ತಡೆದಿದ್ದರೆ, 276 ಎಫ್.ಐ.ಆರ್ ದಾಖಲಾಗಿದೆ. 453 ಬಾಲ್ಯವಿವಾಹ ನಡೆದಿದೆ. 2019ರ ಎಪ್ರಿಲ್ ನಿಂದ ಡಿಸೆಂಬರ್ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ 259 ಬಾಲ್ಯವಿವಾಹಗಳನ್ನು ಇಲಾಖೆಯ ಅಧಿಕಾರಿಗಳು, ವಿವಿಧ ಎನ್.ಜಿ.ಒಗಳು ತಡೆದಿವೆ. ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಬಾಲ್ಯವಿವಾಹ ನಿರ್ಮೂಲನೆಯಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ದೊರಕಿಲ್ಲ.
ಗ್ರಾಮ, ತಾಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಬಾಲ್ಯವಿವಾಹವನ್ನು ತಡೆಯಲು ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿ 3 ತಿಂಗಳಿಗೊಮ್ಮೆ ತಾಲೂಕು, ಜಿಲ್ಲಾ ಮಟ್ಟದ ಸಮಿತಿ ಹಾಗೂ 6 ತಿಂಗಳಿಗೊಮ್ಮೆ ರಾಜ್ಯ ಮಟ್ಟದ ಸಮಿತಿ ಸಭೆ ನಡೆಸಬೇಕು ಎಂದು ಕೋರ್ ಕಮಿಟಿ ವರದಿ ಶಿಫಾರಸು ಮಾಡಿದೆ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








