ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದ್ದು, ತುಟ್ಟಿ ಭತ್ಯೆ ಶೇ. 3.75 ರಷ್ಟು ಹೆಚ್ಚಸಿ ಸರ್ಕಾರ ಆದೇಶ ಹೊರಡಿಸಿದೆ.
UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯು ಶೇ. 4ರಷ್ಟು ಹೆಚ್ಚಳವಾಗಿದೆ.