ಕೆಆರ್‌ಎಸ್ ಡ್ಯಾಂನ ಒಳ ಹರಿವಿನಲ್ಲಿ ಹೆಚ್ಚಳ : 107 ಅಡಿ ತಲುಪಿದ ನೀರಿನ ಮಟ್ಟ
ಮಂಡ್ಯ : ರಾಜ್ಯದಲ್ಲಿ ಉತ್ತಮ ಆಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅದರಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಉತ್ತಮ ಮಳೆ ಆಗುತ್ತಿರುವ ಪರಿಣಾಮ ಕೆಆರ್ ಎಸ್ ಡ್ಯಾಂನ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಈ ಮೂಲಕ ಡ್ಯಾಂನಲ್ಲಿ ನೀರಿನ ಮಟ್ಟ 107 ಅಡಿ ತಲುಪಿದೆ. ಜೊತೆಗೆ ಕೆಆರ್‌ಎಸ್ ಡ್ಯಾಂಗೆ ನೀರು ಹರಿದು ಬರುತ್ತಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ.
ಕಳೆದ ಮೂರು ದಿನಗಳಿಂದ ಕೆಆರ್‌ಎಸ್ ಡ್ಯಾಂಗೆ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಪ್ರಸ್ತುತ 107 ಅಡಿ ಸಂಗ್ರಹವಾಗಿದೆ. ಅಣೆಕಟ್ಟೆಯ ಗರಿಷ್ಠ ನೀರಿನ ಮಟ್ಟ 124.80 ಅಡಿ ಇದೆ.