Nandini | ‘ನಂದಿನಿ’ ಹಾಲಿನ ದರ ಏರಿಕೆ ?
ರಾಜ್ಯ ಸರ್ಕಾರದಿಂದ ಜನರಿಗೆ ಮತ್ತೊಂದು ಶಾಕ್
ಪ್ರತಿ ಲೀಟರ್ ಗೆ 3 ರೂ ಏರಿಕೆ ಮಾಡುವ ಚಿಂತನೆ
ಮಾರ್ಚ್ ತಿಂಗಳ ಅಂತ್ಯದೊಳಗೆ ದರ ಪರಿಷ್ಕರಣೆ
ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೆಎಂಎಫ್
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ತತ್ತರಿಸಿರುವ ಜನರಿಗೆ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಏರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆಯಂತೆ.
ಇದರೊಂದಿಗೆ ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆಯಲು ಮುಂದಾಗಿದೆ.
ಕೊರೊನಾ ಲಾಕ್ ಡೌನ್ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಜನರಿಗೆ ಬೆಲೆ ಏರಿಕೆ ಭೂತ ಹೆಗಲೇರಿದೆ.
ಅತ್ತ ರಷ್ಯಾ – ಉಕ್ರೇನ್ ಯುದ್ಧದ ಕಾರಣದಿಂದಾಗಿ ಭಾರತೀಯರ ಅಡುಗೆ ಮನೆಯಲ್ಲಿ ಭೂಕಂಪನ ಶುರುವಾಗಿದೆ.
ಸೂರ್ಯಕಾಂತಿ ಅಡುಗೆ ಎಣ್ಣೆಯ ಬೆಲೆ ಜನ ಸಾಮಾನ್ಯರ ಕೈ ಮೀರಿದೆ.
ಈ ಪರಿಸ್ಥಿತಿಯಲ್ಲಿ ಹಾಲಿನ ದರ ಹೆಚ್ಚಳ ಜನರಿಗೆ ಮರ್ಮಾಘಾತ ನೀಡಲಿದೆ.
ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಕರ್ನಾಟಕ ಹಾಲು ಮಹಾಮಂಡಳಿ ಸಿದ್ಧತೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಒಂದು ವೇಳೆ ರಾಜ್ಯ ಸರ್ಕಾರ ಕೆಎಂಎಫ್ ನಂದಿನ ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ, ಮಾರ್ಚ್ ಅಂತ್ಯದೊಳಗೆ ದರ ಪರಿಷ್ಕರಣೆಯಾಗುವು ಸಾಧ್ಯತೆ ಇದೆ.
ಅಂದಹಾಗೇ ಈ ಹಿಂದೆ ಕೊರೋನಾ ಸಂದರ್ಭದಲ್ಲಿಯೇ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದ್ರೆ ಕೆಎಂಎಫ್ ಪ್ರಸ್ತಾವನೆಯನ್ನು ಸರ್ಕಾರ ತಿರಸ್ಕರಿಸಿತ್ತು.
Increase in nandini milk price