ದೇಶ್ ವಾಸಿಯೋ `ಮತ್ತೆ ಪೆಟ್ರೋಲ್ ಬೆಲೆ ಏರಿಕೆ’ ಹೊಡೀರಿ ಚಪ್ಪಾಳೆ..!
ನವದೆಹಲಿ : ಕೊರೊನಾ ಸಂಕಷ್ಟ, ಬೆಲೆ ಏರಿಕೆಯಿಂದ ಬರ್ಬಾದ್ ಆಗಿರುವ ಜನ ಸಾಮಾನ್ಯರ ಜೇಬಿನಲ್ಲಿರುವಂತಹ ಚಿಲ್ಲರೆ ಕಾಸಿಗೂ ಕತ್ತರಿ ಬೀಳುತ್ತಿದೆ. ದೇಶದಲ್ಲಿ ಪದೇ ಪದೇ ತೈಲ ಬೆಲೆ ಏರಿಕೆಯಿಂದಾಗಿ ಜನರ ಜೇಬಿನಲ್ಲಿರುವ ಪುಡಿಗಾಸು ಕೂಡ ಖಾಲಿಯಾಗುತ್ತಿದೆ. ಬೆಲೆ ಏರಿಕೆ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಕೂಡ ಪದೇ ಪದೇ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗುತ್ತಲೇ ಇದೆ.
ಇಂದೂ ಕೂಡ ದೇಶದಾದ್ಯಂತ ಪೆಟ್ರೋಲ್ 36 ಪೈಸೆ ಮತ್ತು ಡೀಸೆಲ್ 17 ಏರಿಕೆ ಏರಿಕೆಯಾಗಿದೆ. ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇದರೊಂದಿಗೆ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.9ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.77ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.57ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.42 ರೂ ಗೆ ಏರಿಕೆಯಾಗಿದೆ.
ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.63ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.97 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.51ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.33 ರೂ ಗೆ ಏರಿಕೆಯಾಗಿದೆ.