ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸಭೆ ನಡೆಸಿದರು.
ಕೊರೊನಾ ಸಾವಿನ ಬಗ್ಗೆ ತನಿಖೆ ನಡೆಸಲು 13 ಮಂದಿ ವೈದ್ಯಾಧಿಕಾರಿಗಳ ತಂಡ ಕಾರ್ಯರಂಭ ಮಾಡಲಿದೆ. ಜಿಲ್ಲೆಯಲ್ಲಿ 36 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇವರಲ್ಲಿ 26 ಜನರು ಇತರ ಖಾಯಿಲೆಗಳಿಂದ ಬಳಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು.
ಮೃತರಲ್ಲಿ ಮೂವರು ಮೂವರು ಮಂದಿ ಭಟ್ಕಳ, ಒಬ್ಬರು ಚಿತ್ರದುರ್ಗ ಮತ್ತೊಬ್ಬರು ಮಡಿಕೇರಿ ಮೂಲದವರಾಗಿದ್ದಾರೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ 9 ಮಂದಿ ಸಾವನ್ನಪ್ಪಿದ್ದರೆ, 50 -60 ವರ್ಷದೊಳಗಿನ 10 ಮಂದಿ ಸಾವನ್ನಪ್ಪಿದ್ದಾರೆ. 60-70 ವರ್ಷದೊಳಗೆ 11 ಮಂದಿ ಸಾವನ್ನಪ್ಪಿದ್ದರೆ, 70 ವರ್ಷಕ್ಕಿಂತ ಮೇಲಿನವರು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ದ.ಕ ಜಿಲ್ಲಾಧಿಕಾರಿ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!
ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...








