ಕಲಬುರಗಿಯಲ್ಲಿ ಹೆಚ್ಚಿದ ಬ್ಲ್ಯಾಕ್ ಫಂಗಸ್ ಪ್ರಕರಣಗಳು

1 min read
Black Fungus

ಕಲಬುರಗಿಯಲ್ಲಿ ಹೆಚ್ಚಿದ ಬ್ಲ್ಯಾಕ್ ಫಂಗಸ್ ಪ್ರಕರಣಗಳು Black Fungus

ಕಲಬುರಗಿ : ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಚಿಕಿತ್ಸೆ ಗೆ ಬೇಕಾದ ಇಂಜಕ್ಷನ್ ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕಾಟದ ಮಧ್ಯೆ ಬ್ಲ್ಯಾಕ್ ಫಂಗಸ್ ಸೋಂಕು ಕೂಡ ತನ್ನ ಕಬಂದ ಬಾಹುಗಳನ್ನು ಚಾಚುತ್ತಿದೆ.

ಈ ಬಗ್ಗೆ ತಜ್ಞರು ಹಾಗೂ ವೈದ್ಯರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಮಧ್ಯೆ ಕಲಬುರಗಿಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಮೆಪೋನೆಕ್ಸ್ ಇಂಜಕ್ಷನ್ ಗಾಗಿ ರೋಗಿಗಳು ಪರದಾಡುತ್ತಿದ್ದಾರೆ.

ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 32 ವರ್ಷದ ಮಹಿಳೆ ಬ್ಲ್ಯಾಕ್ ಫಂಗಸ್ ಗೆ ಒಳಗಾಗಿದ್ದು, ಇಂಜಕ್ಷನ್ ಗಾಗಿ ಪರದಾಡುತ್ತಿದ್ದಾರೆ.

ಈಕೆಗೆ ಹದಿನೈದು ದಿನದ ಹಿಂದೆ ಕೊರೊನಾ ಸೋಂಕು ದೃಢವಾಗಿತ್ತು. ಇದೀಗ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.

ಹೀಗಾಗಿ ಮಹಿಳೆ ಕಳೆದ ನಾಲ್ಕು ದಿನದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಇತ್ತ ಜಿಲ್ಲಾಡಳಿತ ಕೂಡ ಬ್ಲ್ಯಾಕ್ ಫಂಗಸ್ ಬಗ್ಗೆ ಹೆಚ್ಚಿನ ಗಮನ ಕೊಡುತ್ತಿಲ್ಲ ಎಂಬ ಬಗ್ಗೆ ಆರೋಪಗಳು ಕೂಡ ಕೇಳಿಬಂದಿವೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd