ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಆದರೆ, ಬೆಂಗಳೂರು ನಗರದ ದಕ್ಷಿಣ ವಲಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಆತಂಕ ಬಿಬಿಎಂಪಿಗೆ ಎದುರಾಗಿದೆ.
ಇತ್ತೀಚೆಗೆ ಮುಕ್ತಾಯವಾದ ಆರ್.ಆರ್ ನಗರದ ಕ್ಷೇತ್ರದ ವಿಧಾನಸಭೆ ಉಪಚುನಾವಣೆ, ದಸರಾ-ವಿಜಯದಶಮಿ ಹಾಗೂ ದೀಪಾವಳಿ ಹಬ್ಬಕ್ಕೆ ಮಾರುಕಟ್ಟೆಗಳಲ್ಲಿ ಜನರು ಕಿಕ್ಕಿರಿದು ಸೇರಿ ಖರೀದಿಗೆ ಮುಗಿಬಿದ್ದಿರುವುದು ಮತ್ತಷ್ಟು ಕೊರೊನಾ ಪ್ರಕರಣಗಳು ಹೆಚ್ಚಾಗುವ ಶಂಕೆ ವ್ಯಕ್ತವಾಹಿದೆ.
ಅದರಲ್ಲೂ, ಆರ್.ಆರ್ ನಗರ ಹಾಗೂ ಹೆಚ್‍ಎಸ್‍ಆರ್ ಲೇಔಟ್, ಬೊಮ್ಮನಹಳ್ಳಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಕುಟುಂಬವೊಂದರ ಆರು ಜನರ ಪೈಕಿ ಐವರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಹೀಗಾಗಿ ಬಿಬಿಎಂಪಿ ಬೆಂಗಳೂರು ದಕ್ಷಿಣ ಭಾಗದಲ್ಲಿ ರ್ಯಾಪಿಡ್ ಅಂಟಿಜೆನ್ ಟೆಸ್ಟ್ ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಈಗಾಗಲೇ ಕೊರೊನಾ ಪರೀಕ್ಷೆಗಳನ್ನು ಚುರುಕುಗೊಳಿಸಲಾಗಿದೆ.
ಒಂದು ಕಡೆ ಚಳಿಗಾಲ ಆರಂಭವಾಗಿರುವುದು, ಮತ್ತೊಂದೆಡೆ, ದೀಪಾವಳಿ ಹಬ್ಬದ ವೇಳೆ ಜನರು ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದೇ ಭರ್ಜರಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದು ಕೊರೊನಾ ಹೆಚ್ಚಳಕ್ಕೆ ಕಾರಣವಾಗುವ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.
ಕೊರೊನಾ ನಿಯಂತ್ರಣದ ಕ್ರಮವಾಗಿ ಪಟಾಕಿಗಳ ಸಿಡಿತದಿಂದ ಬರುವ ಹೊಗೆಯಿಂದ ಉಸಿರಾಟದ ಸಮಸ್ಯೆ ಹೆಚ್ಚಾಗಿ, ಉಸಿರಾಟದ ತೊಂದರೆ ಇರುವಂವರಿಗೆ ಕೊರೊನಾ ಸೊಂಕು ಹರಡಲು ರಾಜಮಾರ್ಗ ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ದೀಪಾವಳಿಗೆ ಪಟಾಕಿ ಹೊಡೆಯುವುದನ್ನು ಸರ್ಕಾರ ಬ್ಯಾನ್ ಮಾಡಿತ್ತು. ಆದರೆ, ನಿಷೇಧಿತ ಪಟಾಕಿ ಬದಲು ಕಡಿಮೆ ಮಾಲಿನ್ಯಕಾರಕ ಹಸಿರು ಪಟಾಕಿ ಸಿಡಿಲು ಅವಕಾಶ ನೀಡಿ ಸರ್ಕಾರ ಹಾಗೂ ಬಿಬಿಎಂಪಿ ಮಾಡಿದ ಯಡವಟ್ಟಿನಿಂದ ಬೆಂಗಳೂರಿನಲ್ಲಿ ಎಲ್ಲಾ ಪಟಾಕಿಗಳನ್ನು ಬೇಕಾಬಿಟ್ಟಿಯಾಗಿ ಸಿಡಿಸಿ ಜನರು ಎಂಜಾಯ್ ಮಾಡಿದ್ದಾರೆ.
ಜನರ ಬೇಜವಾಬ್ದಾರಿ ವರ್ತನೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಪುಷ್ಠಿ ನೀಡಿದಂತಾಗುವ ಎಲ್ಲಾ ಅಪಾಯದ ಲಕ್ಷಣಗಳು ಕಂಡು ಬರುತ್ತಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel