ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 9ನೇ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟೂರ್ನಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯಗಳನ್ನಾಡಿದ್ದು ಆಸ್ಟ್ರೇಲಿಯಾ ವಿರುದ್ಧ ಗೆದ್ದು ಶುಭಾರಂಭ ಮಾಡಿರುವ ಟೀಂ ಇಂಡಿಯಾ ಮತ್ತೊಂದು ಜಯದ ನಿರೀಕ್ಷೆಯಲ್ಲಿದ್ದರೆ. ಸೋಲಿನ ಆರಂಭ ಕಂಡಿರುವ ಅಫ್ಘಾನಿಸ್ತಾನ ಇಂದಿನ ಪಂದ್ಯದಲ್ಲಿ ಗೆದ್ದು ಜಯದ ಹಾದಿಗೆ ಮರಳುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.
ಆಸೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ಗಳಾದ ರೋಹಿತ್ ಶರ್ಮ, ಇಶಾನ್ ಕಿಶನ್ ಜೊತೆಗೆ ಎರಡನೇ ಕ್ರಮಾಂಕದಲ್ಲಿ ಬಂದ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ವೈಫಲ್ಯ ಕಂಡಿದ್ದರು. ಹೀಗಾಗಿ ಈ ಮೂವರು ಬ್ಯಾಟರ್‌ಗಳು ತಮ್ಮ ಬ್ಯಾಟಿಂಗ್ ಲಯ ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಆಸೀಸ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದ ಭಾರತೀಯ ಬೌಲರ್‌ಗಳು ಅಫ್ಘಾನ್ ಬ್ಯಾಟಿಂಗ್ ಬೆನ್ನೆಲುಬು ಮುರಿಯುವ ವಿಶ್ವಾಸದಲ್ಲಿದ್ದಾರೆ.
ಸೋಲಿನ ಆರಂಭ ಕಂಡಿರುವ ಅಫ್ಘಾನಿಸ್ತಾನ ಇಂದಿನ ಪಂದ್ಯಕ್ಕಾಗಿ ಯಾವುದೇ ಬದಲಾವಣೆ ಇಲ್ಲದೆ ಮೊದಲ ಪಂದ್ಯದಲ್ಲಿ ಆಡಿದ್ದ ತಂಡದೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದೆ. ಆದರೆ ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೂವರು ಸ್ಪಿನ್ನರ್‌ಗಳೊಂದಿಗೆ ಆಡಿದ್ದ ಭಾರತ, ಇಂದಿನ ಪಂದ್ಯಕ್ಕೆ ರವಿಚಂದ್ರನ್ ಅಶ್ವಿನ್ ಅವರನ್ನ ತಂಡದಿಂದ ಕೈ ಬಿಟ್ಟು, ಆಲ್‌ರೌಂಡರ್ ಶಾರ್ದೂಲ್ ಥಾಕೂರ್ ಅವರನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಈ ಹಿಂದೆ 2019ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಉತ್ತಮ ಬೌಲಿಂಗ್ ದಾಳಿ ನಡೆಸುವ ಮೂಲಕ ಹ್ಯಾಟ್ರಿಕ್ ಪಡೆದಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ, ಇಂದಿನ ಪಂದ್ಯಕ್ಕೆ ಕಣಕ್ಕಿಳಿಯುವ ನಿರೀಕ್ಷೆ ಇತ್ತು. ಆದರೆ ಶಮಿ ಅವರ ಬದಲಿಗೆ ಶಾರ್ದೂಲ್ ಥಾಕೂರ್ ಅವರನ್ನ ತಂಡಕ್ಕೆ ಸೇರಿಸಿಕೊಂಡಿದೆ.
ಉಭಯ ತಂಡಗಳು:
ಭಾರತ: ರೋಹಿತ್ ಶರ್ಮ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಜ್ಮತುಲ್ಲಾ ಶಹೀದಿ, ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರಾಜಿ಼, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್ ಉಲ್ ಹಕ್, ಫಜ಼ಲ್ ಫರೂಕಿ.
IND v AFG, Team India, Afghanistan, Rohit Sharma, Hashmatullah Shahidi, ODI World Cup