IND v AUS : ಅನಿಲ್ ಕುಂಬ್ಳೆ ದಾಖಲೆ ಮೇಲೆ ಆರ್. ಅಶ್ವಿನ್ ಕಣ್ಣು
ಪ್ರವಾಸಿ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಮೂರನೇ ಟೆಸ್ಟ್ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಟೀಂ ಇಂಡಿಯಾದ ʼಕೇರಂ ಬಾಲ್ʼ ಸ್ಪೆಷಲಿಸ್ಟ್ ಆರ್. ಅಶ್ವಿನ್, ಭಾರತದ ಮಾಜಿ ಆಟಗಾರ ಅನಿಲ್ ಕುಂಬ್ಳೆ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.
ಇಂಧೋರ್‌ನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 3ನೇ ಟೆಸ್ಟ್ ಪಂದ್ಯಕ್ಕಾಗಿ ಎರಡು ತಂಡಗಳು ಭರ್ಜರಿ ತಯಾರಿ ಆರಂಭಿಸಿವೆ. ಅದರಂತೆ ಭಾರತದ ಪ್ರಮುಖ ಸ್ಪಿನ್ ಅಸ್ತ್ರವಾಗಿರುವ ಹಾಗೂ ಭರ್ಜರಿ ಫಾರ್ಮ್‌ನಲ್ಲಿರುವ ಅಶ್ವಿನ್ ಸಹ ಅಭ್ಯಾಸ ಆರಂಭಿಸಿದ್ದಾರೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಿಂದ ಆರಂಭವಾಗಲಿದೆ.
ಈ ನಡುವೆ ಆರ್. ಅಶ್ವಿನ್ ಟೀಂ ಇಂಡಿಯಾದ ಮಾಜಿ ಆಟಗಾರ ಅನಿಲ್ ಕುಂಬ್ಳೆ ಅವರ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅಧಿಕ ವಿಕೆಟ್ ಪಡೆದವರ ಲಿಸ್ಟ್‌ನಲ್ಲಿ ಅನಿಲ್ ಕುಂಬ್ಳೆ 111 ವಿಕೆಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ಈ ದಾಖಲೆ ಹಿಂದಿಕ್ಕುವ ನಿರೀಕ್ಷೆಯೊಂದಿಗೆ ಅಶ್ವಿನ್ 3ನೇ ಟೆಸ್ಟ್‌ಗಾಗಿ ತಯಾರಿ ಆರಂಭಿಸಿದ್ದಾರೆ.
ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಬೌಲರ್ ಆಗಿರುವ ಆರ್. ಅಶ್ವಿನ್, ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲ ಸದ್ಯ 103 ವಿಕೆಟ್ ಪಡೆದಿದ್ದಾರೆ. ಪ್ರಸಕ್ತ ಸರಣಿಯಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಅಶ್ವಿನ್, ಎರಡು ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 14 ವಿಕೆಟ್ ಪಡೆದಿದ್ದಾರೆ. ನಾಗ್ಪುರ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್ ಪಡೆದಿದ್ದ ಅಶ್ವಿನ್, ದೆಹಲಿ ಟೆಸ್ಟ್‌ನಲ್ಲಿ 6 ವಿಕೆಟ್ ಪಡೆದಿದ್ದರು.
IND v AUS , R Ashwin eye on Anil kumble record