ವಿಶ್ವ ಕ್ರಿಕೆಟ್ ಜಗತ್ತು ಎದುರು ನೋಡುತ್ತಿರುವ ಏಕದಿನ ವಿಶ್ವಕಪ್‌ನ ಹೈವೋಲ್ಟೇಜ್ ಫೈನಲ್‌ಗೆ ಕ್ಷಣಗಣನೆ ಶುರುವಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯಕ್ಕಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸಜ್ಜಾಗಿವೆ.
ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್/ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೂರ್ನಿಯಲ್ಲಿ ಜಯದ ಅಲೆಯಲ್ಲಿ ತೇಲುತ್ತಿರುವ ಈ ಎರಡು ತಂಡಗಳು ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಯಾವುದೇ ಬದಲಾವಣೆ ಇಲ್ಲದೆ ಸೆಮಿಫೈನಲ್‌ನಲ್ಲಿ ಆಡಿದ್ದ ತಂಡದೊಂದಿಗೆ ಕಣಕ್ಕಿಳಿಯುತ್ತಿವೆ. ಹೀಗಾಗಿ ಉಭಯ ತಂಡಗಳು ಫೈನಲ್ ಗೆಲುವಿಗಾಗಿ ತಮ್ಮದೇ ರಣತಂತ್ರ ರೂಪಿಸಿಕೊಂಡು ಅಖಾಡಕ್ಕಿಳಿಯುತ್ತಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.
ಸಂಘಟಿತ ಪ್ರದರ್ಶನದ ಮೂಲಕ ತವರಿನಲ್ಲಿ ನಡೆಯುತ್ತಿರುವ ಪ್ರಸಕ್ತ ವಿಶ್ವಕಪ್‌ನಲ್ಲಿ ಅಜೇಯ ತಂಡವಾಗಿರುವ ಟೀಂ ಇಂಡಿಯಾ, ವಿಶ್ವಕಪ್ ಫೈನಲ್ ಗೆಲುವಿಗೆ ತವಕದಲ್ಲಿದ್ದರೆ. ಸೋಲಿನ ಆಘಾತದ ನಡುವೆಯೂ ಬಲಿಷ್ಠ ಕಮ್‌ಬ್ಯಾಕ್ ಮಾಡಿರುವ ಆಸ್ಟ್ರೇಲಿಯಾ ಕೂಡ ಆರನೇ ಬಾರಿಗೆ ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ. ಈ ಎರಡು ತಂಡಗಳು ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟಕ್ಕೇರಲು ಕೇವಲ ಒಂದೇ ಮಟ್ಟಿಲು ಬಾಕಿ ಉಳಿದಿದ್ದು, ಇದಕ್ಕಾಗಿ ಎರಡು ತಂಡಗಳು ಕಾಯುತ್ತಿವೆ.
ಉಭಯ ತಂಡಗಳು:
ಭಾರತ ತಂಡ: ರೋಹಿತ್ ಶರ್ಮ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಪ್ಯಾಟ್ ಕಮ್ಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಆಡಂ ಜ್ಹಂಪ, ಜೋಶ್ ಹೇಜಲ್ವುಡ್.
IND v AUS, Team India, Australia, Rahul Dravid, World Cup Final