ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಭಾರತ ವಿರುದ್ಧದ ಟಿ20 ಸರಣಿ: ವಾರ್ನರ್‌ ಸೇರಿ ಆಸೀಸ್‌ನ ಹಲವರು ಗೈರು

ಮ್ಯಾಥ್ಯೂ ವೇಡ್‌ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಆಸ್ಟ್ರೇಲಿಯಾ ತಂಡ

C Dinesh by C Dinesh
November 21, 2023
in Sports, ಕ್ರಿಕೆಟ್
Australia

Australia

Share on FacebookShare on TwitterShare on WhatsappShare on Telegram

ಇತ್ತೀಚಿಗಷ್ಟೇ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಆಸ್ಟ್ರೇಲಿಯಾ ತಂಡ ಭಾರತ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿದೆ. ಈ ನಡುವೆ ನವೆಂಬರ್‌ 23ರಿಂದ ಆರಂಭವಾಗುವ ಸರಣಿಯಿಂದ ಡೇವಿಡ್‌ ವಾರ್ನರ್‌ ಸೇರಿ ಹಲವು ಹಿರಿಯ ಆಟಗಾರರು ಹೊರಗುಳಿಯಲಿದ್ದಾರೆ.

ಆಸೀಸ್‌ನ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ ಅವರೊಂದಿಗೆ ತಂಡದ ಕ್ಯಾಪ್ಟನ್‌ ಪ್ಯಾಟ್ ಕಮಿನ್ಸ್, ಪ್ರಮುಖ ಬೌಲರ್‌ಗಳಾದ ಜೋಶ್ ಹೇಜ಼ಲ್ವುಡ್‌, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್ ಮತ್ತು ಮಿಚೆಲ್ ಮಾರ್ಷ್ ಅವರುಗಳು ಸಹ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಮ್ಯಾಥ್ಯೂ ವೇಡ್‌ ಅವರ ನೇತೃತ್ವದಲ್ಲಿ ಆಸೀಸ್‌ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ.

David Warner

ಈ ಹಿಂದೆ ಪ್ರಕಟಿಸಲಾಗಿದ್ದ 15 ಮಂದಿ ಆಟಗಾರರ ಆಸ್ಟ್ರೇಲಿಯಾ ತಂಡದಲ್ಲಿ ಆರಂಭಿಕ ಬ್ಯಾಟರ್‌ ಡೇವಿಡ್‌ ವಾರ್ನರ್‌ ಅವರಿಗೆ ಸ್ಥಾನ ನೀಡಲಾಗಿತ್ತು. ಆದರೆ ಇದೀಗ ವಿಶ್ವಕಪ್ ಅಭಿಯಾನದ ಯಶಸ್ವಿ ಮತ್ತು ಬೇಡಿಕೆಯ ಹಿನ್ನೆಲೆಯಲ್ಲಿ ವಾರ್ನರ್ ತವರಿಗೆ ಹಿಂದಿರುಗಲು ಆಸೀಸ್‌ನ ಆಯ್ಕೆಗಾರರು ನಿರ್ಧರಿಸಿದ್ದಾರೆ. ಡೇವಿಡ್‌ ವಾರ್ನರ್‌ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಆಲ್‌ರೌಂಡರ್ ಆರೋನ್ ಹಾರ್ಡಿ ಅವರನ್ನ ಬದಲಿ ಆಟಗಾರನಾಗಿ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಆರಂಭದಲ್ಲಿ ಡರ್ಬನ್‌ನಲ್ಲಿ ಸೌತ್‌ ಆಫ್ರಿಕಾ ವಿರುದ್ಧ ಆರನ್ ಹಾರ್ಡಿ, ಚೊಚ್ಚಲ ಪಂದ್ಯವನ್ನಾಡಿದ್ದರು. ತಂಡದ ಪ್ರಮುಖ ಆಟಗಾರರ ಜೊತೆಗೆ ಆಸ್ಟ್ರೇಲಿಯಾದ ಹೆಡ್‌ ಕೋಚ್‌ ಆಂಡ್ರ್ಯೂ ಮೆಕ್‌ಡೊನಾಲ್ಡ್ ಕೂಡ ಭಾರತ ವಿರುದ್ಧ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಇವರ ಬದಲಿಗೆ ಸಹಾಯಕ ಕೋಚ್ ಆಂಡ್ರೆ ಬೊರೊವೆಕ್ ಅವರು ತಂಡದ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಭಾರತ ಸರಣಿಗಾಗಿ ಆಸ್ಟ್ರೇಲಿಯಾ ತಂಡ:
ಮ್ಯಾಥ್ಯೂ ವೇಡ್ (ನಾಯಕ), ಆರನ್ ಹಾರ್ಡಿ, ಜೇಸನ್ ಬೆಹ್ರೆನ್‌ಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಕೇನ್ ರಿಚರ್ಡ್‌ಸನ್, ಆಡಮ್ ಜ್ಹಂಪ.

IND v AUS, Team India, Australia, David Warner, T20I Series

Tags: #David Warner.AustraliaIND v AUST20I seriesteam india
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram