ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಇದೀಗ ಟಿ20 ಕ್ರಿಕೆಟ್ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.
ಏಕದಿನ ವಿಶ್ವಕಪ್ ಫೈನಲ್ ಸೋಲಿನ ಆಘಾತದಿಂದ ಹೊರಬರುವ ಜೊತೆಗೆ 2024ರ ಟಿ20 ವಿಶ್ವಕಪ್ಗೆ ಬಲಿಷ್ಠ ತಂಡವನ್ನ ರೂಪಿಸುವ ನಿಟ್ಟಿನಲ್ಲಿ ಟೀಂ ಇಂಡಿಯಾ ತಯಾರಿ ಆರಂಭಿಸಿದೆ. ಹೀಗಾಗಿ ತವರಿನಲ್ಲಿ ನಡೆಯುವ ಆಸೀಸ್ ವಿರುದ್ಧದ ಟಿ20 ಸರಣಿಗೆ ಯುವ ಆಟಗಾರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ಮೊದಲ ಬಾರಿಗೆ ಮುನ್ನಡೆಯುತ್ತಿರುವ ಭಾರತಕ್ಕೆ ಈ ಸರಣಿ ದೊಡ್ಡಮಟ್ಟದ ಅಗ್ನಿಪರೀಕ್ಷೆಯಾಗಲಿದೆ.
ಈ ಟಿ20 ಸರಣಿಗೆ ಉಭಯ ತಂಡಗಳಲ್ಲೂ ಸಹ ಪ್ರಮುಖ ಆಟಗಾರರ ಅಲಭ್ಯತೆ ಕಾಡುತ್ತಿದೆ. ಹೀಗಾಗಿ ಎರಡು ತಂಡಗಳು ಯುವ ಆಟಗಾರರ ಬಲದೊಂದಿಗೆ ಕಣಕ್ಕಿಳಿಯುತ್ತಿವೆ. ಭಾರತದ ಪರ ಸೂರ್ಯಕುಮಾರ್ ಯಾದವ್ ಜೊತೆಗೆ ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಅವರುಗಳು ತಂಡದ ಪ್ರಮುಖ ಬ್ಯಾಟರ್ಗಳಾಗಿದ್ದರೆ. ಪ್ರಸಿದ್ಧ ಕೃಷ್ಣ, ಅರ್ಶದೀಪ್ ಸಿಂಗ್, ರವಿ ಬಿಷ್ಣೋಯಿ ಅವರುಗಳು ಬೌಲಿಂಗ್ ವಿಭಾಗದ ಜವಾಬ್ದಾರಿ ಹೊತ್ತಿದ್ದಾರೆ. ಇನ್ನೂ ಆಲ್ರೌಂಡರ್ ಸ್ಥಾನದಲ್ಲಿ ಅಕ್ಸರ್ ಪಟೇಲ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.
ಮತ್ತೊಂದೆಡೆ ಆಸ್ಟ್ರೇಲಿಯಾ ಕೂಡ ಮ್ಯಾಥ್ಯೂ ವೇಡ್ ನಾಯಕತ್ವದಲ್ಲಿ ಟಿ20 ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಹೀಗಾಗಿ ಅನುಭವಿ ಆಟಗಾರರಾದ ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಟಿಮ್ ಡೇವಿಡ್ ಅವರುಗಳ ತಂಡದ ಪ್ರಮುಖ ಬ್ಯಾಟರ್ಗಳಾಗಿದ್ದರೆ. ಮಾರ್ಕಸ್ ಸ್ಟಾಯ್ನಿಸ್ ಆಲ್ರೌಂಡರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಬೌಲಿಂಗ್ನಲ್ಲಿ ಸೆನ್ ಅಬೊಟ್, ಕೇನ್ ರಿಚರ್ಡ್ಸನ್, ಬೆಹ್ರನ್ಡ್ರಾಫ್ ಜೊತೆಗೆ ತನ್ವೀರ್ ಸಾಂಘ ಮೇಲೆ ಜವಾಬ್ದಾರಿ ಹೆಚ್ಚಿದೆ.
ಭಾರತ ಸಂಭಾವ್ಯ ತಂಡ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ಸಂಭಾವ್ಯ ತಂಡ: ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಮ್ಯಾಥ್ಯೂ ಶಾರ್ಟ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ತನ್ವೀರ್ ಸಂಘ, ಜೇಸನ್ ಬೆಹೆರೆಂಡಾಫ್, ಸೀನ್ ಅಬಾಟ್, ಕೇನ್ ರಿಚರ್ಡ್ಸನ್.
IND v AUS, Team India, Australia, Suryakumar Yadav, T20I Series