ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್‌ನ ಮಹತ್ವದ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದು, ಆಸ್ಟ್ರೇಲಿಯಾ ವಿರುದ್ಧ ಇಂದು(ನ.19) ನಡೆಯುವ ಏಕದಿನ ವಿಶ್ವಕಪ್ 2023ರ ಫೈನಲ್‌ನಲ್ಲಿ ಈ ಸಾಧನೆ ಮಾಡುವ ನಿರೀಕ್ಷೆಯಲ್ಲಿದ್ದಾರೆ.
ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದ ಜಯದ ಯಶಸ್ಸಿನಲ್ಲಿ ಮೊಹಮ್ಮದ್ ಶಮಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಟೂರ್ನಿಯಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದಿರುವ ಬೌಲರ್‌ಗಳ ಲಿಸ್ಟ್‌ನಲ್ಲಿ ಅಗ್ರಸ್ಥಾನದಲ್ಲಿರುವ ಶಮಿ, ಇದೀಗ ಒಂದು ಆವೃತ್ತಿಯಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದು ದಾಖಲೆ ಬರೆಯಲು ಕಾಯುತ್ತಿದ್ದಾರೆ.
ಪ್ರಸಕ್ತ ವಿಶ್ವಕಪ್‌ನ ಆರಂಭಿಕ ನಾಲ್ಕು ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಶಮಿ, ನಂತರ ನ್ಯೂಜಿ಼ಲೆಂಡ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ತಮಗೆ ಸಿಕ್ಕಂತ ಈ ಅವಕಾಶವನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡ ಮೊಹಮ್ಮದ್ ಶಮಿ, ತಮ್ಮ ಆಕ್ರಮಣಕಾರಿ ಬೌಲಿಂಗ್‌ನಿಂದ ಭಾರತ ಅಜೇಯ ಗೆಲುವಿನ ಓಟದಲ್ಲಿ ಪ್ರಮುಖ ಹೀರೋ ಆಗಿ ಮಿಂಚಿದ್ದಾರೆ. ಸದ್ಯ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಳಲ್ಲಿ 23 ವಿಕೆಟ್‌ಗಳನ್ನ ಪಡೆದಿದ್ದಾರೆ.
ಹೀಗಾಗಿ ವಿಶ್ವಕಪ್ ಆವೃತ್ತಿಯೊಂದರಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದ ದಾಖಲೆ ಮುರಿಯುವ ಎಲ್ಲಾ ಅವಕಾಶ ಮೊಹಮ್ಮದ್ ಶಮಿ ಅವರಿಗೆ ಲಭಿಸಿದೆ. ಸದ್ಯ ಏಕದಿನ ವಿಶ್ವಕಪ್‌ನ ಆವೃತ್ತಿಯೊಂದರಲ್ಲಿ ಹೆಚ್ಚು ವಿಕೆಟ್ ಪಡೆದ ಸಾಧನೆ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿದೆ. 2019ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಸ್ಟಾರ್ಕ್, 10 ಪಂದ್ಯಗಳಲ್ಲಿ 27 ವಿಕೆಟ್‌ಗಳನ್ನ ಪಡೆದು ಯಶಸ್ವಿ ಬೌಲರ್ ಎನಿಸಿದ್ದರು. ಇದೀಗ ಮಿಚೆಲ್ ಸ್ಟಾರ್ಕ್ ಅವರ ಈ ಸಾಧನೆ ಸರಿಗಟ್ಟಲು ಶಮಿ ಅವರಿಗೆ 4 ವಿಕೆಟ್‌ಗಳ ಅಗತ್ಯವಿದ್ದು, ಹೊಸ ದಾಖಲೆ ಬರೆಯಲು 5 ವಿಕೆಟ್‌ಗಳ ಅಗತ್ಯವಿದೆ.
ಟೂರ್ನಿಯಲ್ಲಿ ಈವರೆಗೂ ಆಡಿರುವ ಆರು ಪಂದ್ಯಗಳಲ್ಲಿ ಮೂರು ಬಾರಿ 5 ವಿಕೆಟ್‌ಗಳನ್ನ ಪಡೆದಿರುವ ಶಮಿ, ಸೆಮಿಫೈನಲ್‌ನಲ್ಲಿ ನ್ಯೂಜಿ಼ಲೆಂಡ್‌ನ ವಿರುದ್ಧ 57 ರನ್‌ಗಳನ್ನ ನೀಡಿ 7 ವಿಕೆಟ್ ಪಡೆದು ಮಿಂಚಿದ್ದರು. ಅಲ್ಲದೇ ಈ ಪ್ರದರ್ಶನದೊಂದಿಗೆ ವಿಶ್ವಕಪ್‌ನಲ್ಲಿ ಭಾರತದ ಪರ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದ ಹೆಗ್ಗಳಿಕೆ ಪಡೆದಿದ್ದ ಶಮಿ, ಏಕದಿನ ವಿಶ್ವಕಪ್‌ನಲ್ಲಿ 50ಕ್ಕೂ ಹೆಚ್ಚು ವಿಕೆಟ್‌ಗಳನ್ನ ಪಡೆದ ಭಾರತದ ಬೌಲರ್ ಎನಿಸಿದ್ದಾರೆ.
IND v AUS, Team India, Australia, World Cup, Final Match