ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ ಪ್ರದರ್ಶಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮತ್ತೊಮ್ಮೆ ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿ ಭಾರೀ ನಿರಾಸೆ ಅನುಭವಿಸಿದ್ದಾರೆ.
ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಟೂರ್ನಿಯಲ್ಲಿ ಅಬ್ಬರಿಸಿದ್ದ ರೋಹಿತ್, ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ನಲ್ಲೂ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನಿಂಗ್ಸ್ ಆರಂಭದಿಂದಲೇ ಆಸೀಸ್ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ(47 ರನ್, 31 ಬಾಲ್, 4 ಬೌಂಡರಿ, 3 ಸಿಕ್ಸ್) ಟೀಂ ಇಂಡಿಯಾಕ್ಕೆ ಭರ್ಜರಿ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕ ರನ್‌ಗಳಿಕೆಯ ವೇಗವನ್ನ ಹೆಚ್ಚಿಸಿದ್ದ ರೋಹಿತ್, ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ರನ್‌ಗಳಿಸುವ ಆತುರದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಬೌಲಿಂಗ್‌ನಲ್ಲಿ ಟ್ರಾವಿಸ್ ಹೆಡ್ ಹಿಡಿದ ಅದ್ಭುತ ಕ್ಯಾಚ್‌ನಿಂದಾಗಿ ಅರ್ಧಶತಕದ ಹೊಸ್ತಿಲಲ್ಲಿ ಮತ್ತೊಮ್ಮೆ ಎಡವಿದರು. ಇದರೊಂದಿಗೆ ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ 5ನೇ ಬಾರಿಗೆ ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿ ನಿರಾಸೆ ಮೂಡಿಸಿದರು.
ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ ಪ್ರದರ್ಶಿಸಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ,(48(40) v ಬಾಂಗ್ಲಾದೇಶ, 46(40) v ನ್ಯೂಜಿ಼ಲೆಂಡ್, 40(24) v ಸೌತ್ ಆಫ್ರಿಕಾ) ಅರ್ಧಶತಕದ ಹೊಸ್ತಿಲಲ್ಲಿ ಔಟಾಗಿದ್ದರು. ಇದಾದ ಬಳಿಕ ಸೆಮೀಸ್‌ನಲ್ಲಿ ನ್ಯೂಜಿ಼ಲೆಂಡ್ ವಿರುದ್ಧವೂ 47(29) ಅರ್ಧಶತಕ ಬಾರಿಸುವಲ್ಲಿ ವಿಫಲವಾಗಿದ್ದ ಹಿಟ್‌ಮ್ಯಾನ್, ಇಂದು ನಡೆದ ಆಸೀಸ್ ವಿರುದ್ಧದ ಫೈನಲ್‌ನಲ್ಲೂ ಸಹ 47(30) ಅರ್ಧಶತಕ ಬಾರಿಸುವಲ್ಲಿ ವಿಫಲವಾಗಿ ಮತ್ತೆ ನಿರಾಸೆ ಕಂಡರು.
ರೋಹಿತ್ ಶರ್ಮ ಪ್ರದರ್ಶನ – 2023ರ ವಿಶ್ವಕಪ್‌ನಲ್ಲಿ
ಪಂದ್ಯಗಳು – 11
ರನ್‌ಗಳು – 597
ಸರಾಸರಿ – 54.27
ಸ್ಟ್ರೈಕ್ ರೇಟ್ – 125.94
50/100 – 3/1
ಗರಿಷ್ಠ ಸ್ಕೋರ್ – 131 v ಅಫ್ಘಾನಿಸ್ತಾನ
IND v AUS, Team India, Australia, Rohit Sharma, World Cup Final